ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ
ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಎಂ ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿರುದ್ಧವಾಗಿ ಎಂ ಲಕ್ಷ್ಮಣ್ ಕಣಕ್ಕೆ ಇಳಿದಿದ್ದಾರೆ.
ಮೈಸೂರು, ಮಾರ್ಚ್.22:ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ ಆರಂಭವಾಗಿದೆ. ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಎಂ ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದು ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಸೇರಿ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿರುದ್ಧವಾಗಿ ಎಂ ಲಕ್ಷ್ಮಣ್ ಕಣಕ್ಕೆ ಇಳಿದಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಮಣೆ ಹಾಕಿದೆ. ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಲಕ್ಷ್ಮಣ್, ಪ್ರತಾಪ್ ಸಿಂಹ ಹಿಟ್ ವಿಕೆಟ್ ಆಗೋದ್ರು ಎಂದು ವ್ಯಂಗ್ಯವಾಡಿದ್ದಾರೆ. ಪ್ರತಾಪ್ ಸಿಂಹ 10 ವರ್ಷ ಸಂಸದರಾಗಿದ್ದರು. ಅವರಿಗೇ ಟಿಕೆಟ್ ಸಿಗುತ್ತೆ ಅಂತ ನಾನು ಅಂದುಕೊಂಡಿದ್ದೆ. ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧೆ ಮಾಡಬೇಕು ಅಂತ ಪಟ್ಟು ಹಿಡಿದು ಟಿಕೆಟ್ ತೆಗೆದುಕೊಂಡು ಬಂದೆ. ಆದ್ರೆ ಪ್ರತಾಪ್ ಸಿಂಹ ಅವರಾಗಿ ಅವರೇ ಔಟ್ ಆಗಿಬಿಟ್ರು. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದು ಯಾಕೆ? ಕಾರಣ ಏನು ಅಂತ ಬಿಜೆಪಿಯವರು ಹೇಳಬೇಕು. ಪ್ರತಾಪ್ ಸಿಂಹ ವಿರುದ್ಧ ಆಡಿಯೋ, ವಿಡಿಯೋ ಇತ್ತಾ? ಏನಾದರೂ ದಾಖಲೆಗಳಿದ್ದವೇ ಅಥವಾ ವರಿಷ್ಠರು ಕರೆದು ಹೇಳಿದ್ರ? ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಲು ಕಾರಣ ಏನು ಅಂತ ಇನ್ನೂ ಗೊತ್ತಾಗಿಲ್ಲ ಎಂದರು.
ಈ ಬಾರಿ ಮತದಾರರು ನನ್ನ ಕೈ ಹಿಡಿಯದಿದ್ದರೆ ನಾನು ಸತ್ತಂಗೆ
ನಾಲ್ಕು ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಈ ಹಿಂದೆ ಮತದಾರರು ನನ್ನನ್ನು ಕೈ ಹಿಡಿಯಲಿಲ್ಲ. ನಾನೇ ಸೂಕ್ತ ಅಭ್ಯರ್ಥಿ ಎಂದು ಪಕ್ಷ ನನಗೆ ಟಿಕೆಟ್ ಕೊಟ್ಟಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ