AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಅಪಘಾತ: 2 ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಶಾಸಕ ಶ್ರೀವತ್ಸ

ಬೈಕ್​ ಅಪಘಾತ: 2 ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಿಜೆಪಿ ಶಾಸಕ ಶ್ರೀವತ್ಸ

ರಾಮ್​, ಮೈಸೂರು
| Edited By: |

Updated on:Aug 02, 2023 | 3:11 PM

Share

Mysore News: ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಇಬ್ಬರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಬಿಜೆಪಿ ಶಾಸಕ ಶ್ರೀವತ್ಸ ಮಾನವೀಯತೆ ಮೆರೆದಿದ್ದಾರೆ.

ಮೈಸೂರು, ಆಗಸ್ಟ್​​ 02: ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಇಬ್ಬರು ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಬಿಜೆಪಿ ಶಾಸಕ ಟಿಎಸ್​ ಶ್ರೀವತ್ಸ (MLA Ts Srivatsa) ಮಾನವೀಯತೆ ಮೆರೆದಿದ್ದಾರೆ. ಘಟನೆ ಸಂಭವಿಸಿದ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಕಂಡು ಆಟೋದಲ್ಲಿ ಬಾಲಕಿಯರನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Aug 02, 2023 03:04 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More