ಮೈಸೂರು: ಅಕ್ರಮ ಪ್ರಶ್ನಿಸಿದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ತಂಬಾಕು ಮಂಡಳಿ ಅಧಿಕಾರಿ

Edited By: ಆಯೇಷಾ ಬಾನು

Updated on: Oct 29, 2023 | 1:27 PM

ತಂಬಾಕು ಮಂಡಳಿಯ ಅಧಿಕಾರಿ ಬ್ರಿಜ್ ಭೂಷಣ್‌ ಎಂಬುವವರು ರೈತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶೂನಿಂದ ಹಲ್ಲೆಗೆ ಯತ್ನಿಸಿದ್ದಾರೆ. ರೈತನ ಮೇಲೆ ಹಲ್ಲೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ. ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಮೈಸೂರು, ಅ.29: ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರೈತನ ಮೇಲೆ ಶೂನಿಂದ ಹಲ್ಲೆಗೆ ಯತ್ನಿಸಲಾಗಿದೆ. ಹುಣಸೂರು ತಾಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರೈತ ಕೃಷ್ಣಕುಮಾರ್ ಮೇಲೆ ಪ್ಲಾಟ್‌ಫಾತಂ 62ನೇ ಅಧೀಕ್ಷಕ ಬ್ರಿಜ್ ಭೂಷಣ್‌ ಹಲ್ಲೆಗೆ ಯತ್ನಿಸಿದ್ದಾರೆ. ರೈತನ ಮೇಲೆ ಅಧಿಕಾರಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More