ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ

Edited By:

Updated on: May 09, 2026 | 2:13 PM

ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಬಳಿ ಭವ್ಯ ವೇದಿಕೆ ನಿರ್ಮಾಣವಾಗಿದ್ದು, ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಪಂಚ ಕೌಂಟರ್‌ಗಳಲ್ಲಿ ವಿವಿಧ ಭಕ್ಷ್ಯಗಳ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿದೆ.

ಚಿತ್ರದುರ್ಗ, ಮೇ 09: ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಕಾರ್ಯನಿರ್ವಹಿಸುತ್ತಿದ್ದು, ಮೈಸೂರ್ ಪಾಕ್, ಮೊಸರನ್ನ, ಟೊಮೆಟೊ ಬಾತ್, ಪಲಾವ್, ಮೆಂತ್ಯ ಪಲಾವ್ ಸೇರಿದಂತೆ ವಿವಿಧ ಖಾದ್ಯಗಳ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More