ಮೈಸೂರು: ನಂಜನಗೂಡಿನಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರಾ ಮಹೋತ್ಸವ
ಜಿಲ್ಲೆಯ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ದಕ್ಷಿಣ ಕಾಶಿಯೆಂದೇ ಖ್ಯಾತವಾಗಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾರಥೋತ್ಸವ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ ನೆರವೇರಿತು.
ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಶ್ರೀಕಂಠೇಶ್ವರಸ್ವಾಮಿ ದೊಡ್ಡಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ದಕ್ಷಿಣ ಕಾಶಿಯೆಂದೇ ಖ್ಯಾತವಾಗಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾರಥೋತ್ಸವ ಬೆಳಗ್ಗೆ 6.00ರಿಂದ 6.40ವರೆಗಿನ ಶುಭ ಮೀನ ಲಗ್ನದಲ್ಲಿ ನೆರವೇರಿತು. ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಿ ಹಾಗೂ ಶ್ರೀಕಂಠೇಶ್ವರಸ್ವಾಮಿ ಮೆರವಣಿಗೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು. ಈ ಉತ್ಸವ ಮೂರ್ತಿಗಳನ್ನು 5 ಅಲಂಕೃತ ರಥಗಳಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಿದ್ದು, ದೇವಾಲಯದ ಆವರಣದಿಂದ ಮೊದಲಿಗೆ ಸಂಪ್ರದಾಯದಂತೆ ಗಣಪತಿ ರಥ, ನಂತರ ಶ್ರೀಕಂಠೇಶ್ವರ ಸ್ವಾಮಿಯ ಬೃಹತ್ ರಥ, ಪಾರ್ವತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ ರಥಗಳು ನಂಜನಗೂಡಿನ ರಥ ಬೀದಿಯಲ್ಲಿ ರಥೋತ್ಸವ ಸಾಗಿತು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 02, 2023 09:07 AM