ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ

Updated on: Feb 08, 2025 | 10:33 AM

ಮೈಸೂರಿನ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 13 ರವರೆಗೆ ಕುಂಭಮೇಳ ನಡೆಯಲಿದೆ. ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ನಿರ್ಮಲಾನಂದನಾಥ ಶ್ರೀಗಳು ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಶಸ್ವಿ ಕುಂಭಮೇಳಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯ.

ಮೈಸೂರಿನ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 13ನೇ ವರ್ಷದ ಕುಂಭಮೇಳ ಆರಂಭವಾಗಲಿದೆ. ಕುಂಭಮೇಳ ಮೂರು ದಿನಗಳ ಕಾಲ ನಡೆಯಲಿದೆ. ಕುಂಭಮೇಳ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಶ್ರೀಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಆಗಮಿಸುತ್ತಾರೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡಬೇಕು. ಕುಂಭಮೇಳ ಯಶಸ್ವಿಗೆ ಅಧಿಕಾರಿಗಳು, ಸಾರ್ವಜನಿಕರ ಸಹಕಾರ ಮುಖ್ಯ. ಯಾವುದೇ ಲೋಪದೋಷ ಆಗದ ರೀತಿಯಲ್ಲಿ ಕ್ರಮವಹಿಸಿ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

 

Published on: Feb 08, 2025 10:32 AM