ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮೈಸೂರಿನ ಯುಕ್ತಿ ಕೆ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಲಾಂಗ್ ಜಂಪ್‌ನಲ್ಲಿ ಬೆಳ್ಳಿ ಮತ್ತು 4X100 ರಿಲೇನಲ್ಲಿ ಚಿನ್ನದ ಪದಕ ಗೆದ್ದ ಯುಕ್ತಿ, ಮೈಸೂರಿನ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ. ಓವೆಲ್ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯುತ್ತಿರುವ ಯುಕ್ತಿ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಗುರಿ ಹೊಂದಿದ್ದಾರೆ.
ಮೈಸೂರು, ಜೂನ್ 24: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ಯುಕ್ತಿ ಕೆ ಅವರು ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದಿದ್ದಾರೆ. ವಿದ್ಯಾರ್ಥಿನಿ ಯುಕ್ತಿ ಕೆ ಅವರು ಮೈಸೂರಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾರೆ. ವಿದ್ಯಾರ್ಥಿನಿ ಯುಕ್ತಿ ಕೆ ಅವರು ಲಾಂಗ್ ಜಂಪ್‌ನಲ್ಲಿ ಬೆಳ್ಳಿ ಪದಕ ಮತ್ತು 4X100 ರಿಲೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಮೈಸೂರಿನ ಹೆಬ್ಬಾಳ್ ನಿವಾಸಿಯಾಗಿರುವ ಕಿಶೋರ್ ಮತ್ತು ನಂದಿನಿ ದಂಪತಿ ಪುತ್ರಿ ಯುಕ್ತಿ ಕೆ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಅಥ್ಲಿಟ್ಸ್‌ಗಳು ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಯುಕ್ತಿ ಅವರು ಮೈಸೂರಿನ ಓವೆಲ್ ಅಥ್ಲೆಟಿಕ್ಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಅಭ್ಯಾಸ ಮಾಡುತ್ತಿದ್ದಾರೆ. ಈಗಾಗಲೇ ಹಲವು ಜಿಲ್ಲಾ ಮಟ್ಟದ ಸ್ಪರ್ಧೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪದಕಗಳನ್ನು ಗೆದ್ದಿದ್ದಾರೆ. ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಲು ತಯಾರಿ ನಡೆಸಿರುವ ಯುಕ್ತಿ ಅವರು ಅಲ್ಲಿಯೂ ಕೂಡ ಪದಕಗಳನ್ನು ಗಳಿಸುವ ಕನಸು ಕಟ್ಟಿಕೊಂಡಿದ್ದಾರೆ. ಇದಕ್ಕಾಗಿ ಯುಕ್ತಿ ಅವರು ನಿರಂತರ ಅಭ್ಯಾಸ ಮಾಡುತ್ತಿದ್ದಾರೆ.