ಗದಗ: ಆಂಜನೇಯ ದೇಗುಲದಲ್ಲಿ ಮೂರು ದಿನಗಳಿಂದ ನಿರಂತರ ಕೇಳಿಸುತ್ತಿದೆ ನಿಗೂಢ ಗೆಜ್ಜೆ ಶಬ್ದ!

Edited By:

Updated on: Jan 17, 2026 | 12:54 PM

ಕೊರ್ಲಹಳ್ಳಿ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದೆ. ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ದೇಗುಲದಲ್ಲಿ ಪ್ರತಿಷ್ಠಾಪಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಗೆಜ್ಜೆನಾದ ಕೇಳಲು ನೂರಾರು ಗ್ರಾಮಸ್ಥರು ದೇವಸ್ಥಾನದ ಮುಂದೆ ಜಮಾಯಿಸಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ ಮಹೇಶ್ ತಿಳಿಸಿದ್ದಾರೆ.

ಗೆಜ್ಜೆ ಶಬ್ದ ಕೇಳಿದ ಕೂಡಲೇ ನೂರಾರು ಗ್ರಾಮಸ್ಥರು ದೇವಸ್ಥಾನಕ್ಕೆ ಓಡೋಡಿ ಬಂದಿದ್ದು, ರಾತ್ರಿಯಿಡೀ ಅಲ್ಲೇ ಜಾಗರಣೆ ಮಾಡಿದ್ದಾರೆ. ಈ ಶಬ್ದ ದೇವಸ್ಥಾನದ ಗರ್ಭಗುಡಿಯಿಂದ ಕೇಳಿಬರುತ್ತಿದೆ ಎನ್ನಲಾಗಿದೆ. ಭಯದಿಂದ ಯಾವುದೇ ಗ್ರಾಮಸ್ಥರು ಒಳಗಡೆ ಹೋಗಲು ಮುಂದಾಗಿಲ್ಲ. ಗ್ರಾಮಸ್ಥರು ಈ ಘಟನೆಯ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 17, 2026 12:50 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More