ಅಣ್ಣಾವ್ರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ; ಕಿಟಕಿ ಗಾಜುಗಳು ಪುಡಿಪುಡಿ!

Edited By:

Updated on: Nov 10, 2026 | 8:20 AM

ವರನಟ ಡಾ. ರಾಜಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಅಣ್ಣಾವ್ರ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ. ಕಚ್ಚಾ ಬಾಂಬ್ ದಾಳಿಯ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ತಾಳವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಹಿಂದಿನ ಕಾರಣವೇನು ಎಂಬ ಕುತೂಹಲ ಮೂಡಿದೆ.

ತಮಿಳುನಾಡು, ನವೆಂಬರ್ 10: ವರನಟ ಡಾ. ರಾಜಕುಮಾರ್ ಅವರ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿರುವ ಘಟನೆ ತಮಿಳುನಾಡಿನ ಗಾಜನೂರಿನಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳೆಲ್ಲ ಪುಡಿಪುಡಿಯಾಗಿದ್ದು, ಅಣ್ಣಾವ್ರ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ.

ಗಾಜನೂರಿನಲ್ಲಿರುವ ಡಾ. ರಾಜಕುಮಾರ್ ಅವರ ಸಂಬಂಧಿಕರ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಏಕಾಏಕಿ ಸಂಭವಿಸಿದ ಸ್ಫೋಟದಿಂದ ಮನೆಯ ಗಾಜುಗಳು ಸಂಪೂರ್ಣವಾಗಿ ಒಡೆದುಹೋಗಿವೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಈ ಘಟನೆ ಕುರಿತು ಡಾ. ರಾಜಕುಮಾರ್ ಅವರ ಸಂಬಂಧಿ ಮನೋಗ್ನ ಅವರು ಟಿವಿ9ಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಮಿಳುನಾಡಿನ ತಾಳವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನು, ಇದು ಉದ್ದೇಶಪೂರ್ವಕ ದಾಳಿಯೇ ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 10, 2026 08:19 AM
Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More