ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ: ಏಷ್ಯಾ ಪೆಸಿಫಿಕ್ ಡೆಫ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ!
ಮಲೇಷ್ಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡೆಫ್ ಮಲ್ಟಿ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಪ್ರತಿಭಾನ್ವಿತ ಕ್ರೀಡಾಪಟು ಎಂ. ರಿಷಿತಾ 4×100 ಮೀಟರ್ ರಿಲೇ ಓಟದಲ್ಲಿ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. 100 ಹಾಗೂ 200 ಮೀಟರ್ ಓಟದಲ್ಲೂ ಫೈನಲ್ ಪ್ರವೇಶಿಸಿ ಗಮನಾರ್ಹ ಸಾಧನೆ ಮಾಡಿರುವ ರಿಷಿತಾ ಅವರ ಹೆಮ್ಮೆಯ ಕ್ರೀಡಾ ಸಾಧನೆಯ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೈಸೂರು, ಅಕ್ಟೋಬರ್ 10: ಮೈಸೂರಿನ ಕ್ರೀಡಾಪಟು ಎಂ. ರಿಷಿತಾ ಅವರು ಮಲೇಷ್ಯಾದ ಪೆನಾಂಗ್‌ನಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡೆಫ್ ಮಲ್ಟಿ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ 2026ರಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪ್ರತಿನಿಧಿಯಾಗಿ ಕಣಕ್ಕಿಳಿದ ರಿಷಿತಾ, 100 ಮೀಟರ್ ಮತ್ತು 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಫೈನಲ್‌ಗೆ ಪ್ರವೇಶಿಸಿ 7ನೇ ಸ್ಥಾನ ಪಡೆದರು. ಇದರೊಂದಿಗೆ 4×100 ಮೀಟರ್ ರಿಲೇ ಓಟದ ವಿಭಾಗದಲ್ಲಿ ಭಾರತ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮೈಸೂರಿನ ಸಿದ್ದಲಿಂಗೇಶ್ವರ ಬಡಾವಣೆ ನಿವಾಸಿ ಟಿ.ಸಿ. ಮಂಜುನಾಥ್ ಹಾಗೂ ಎಚ್.ಎಸ್. ದರ್ಶಿನಿ ದಂಪತಿಯ ಪುತ್ರಿಯಾಗಿರುವ ರಿಷಿತಾ ಅವರ ಈ ಅಮೋಘ ಸಾಧನೆಗೆ ಕ್ರೀಡಾಭಿಮಾನಿಗಳು ಹಾಗೂ ಗಣ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us