ಮೇಘಾಲಯ ರಾಜ್ಯಪಾಲರಾಗಿ ನೇಮಕವಾಗಿದ್ದಕ್ಕೆ ವಿಜಯಶಂಕರ್ ಹೇಳಿದ್ದೇನು? ಇಲ್ಲಿದೆ ಮನದ ಮಾತು

| Updated By: ರಮೇಶ್ ಬಿ. ಜವಳಗೇರಾ

Updated on: Jul 28, 2024 | 1:33 PM

ಕರ್ನಾಟಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಂಸದರಾಗಿದ್ದ ಮೈಸೂರಿನ ವಿಜಯಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿದೆ ನೇಮಕ ಮಾಡಲಾಗಿದೆ. ಇನ್ನು ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ ಎಚ್ ವಿಜಯಶಂಕರ್ ಹಾಗೂ ಅವರ ಪತ್ನಿ ಬಬಿತಾ ವಿಜಯಶಂಕರ್ ಜೊತೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

ಮೈಸೂರು, (ಜುಲೈ 28): ಮೇಘಾಲಯದ (Meghalaya) ರಾಜ್ಯಪಾಲರಾಗಿ (Meghalaya Governor) ಕರ್ನಾಟಕದ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ (CH Vijayashankar) ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ವಿಜಯಶಂಕರ್‌ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಆದೇಶ ಹೊರಡಿಸಿದ್ದಾರೆ. ನಿನ್ನೆ (ಜುಲೈ 27)ತಡರಾತ್ರಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಶಂಕರ್‌ ಅವರು ಮೈಸೂರಿನ ಮಾಜಿ ಸಂಸದ ಹಾಗೂ ಮಾಜಿ ಸಚಿವರಾಗಿದ್ದರು.

ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಅರಣ್ಯ, ಪರಿಸರ ಇಲಾಖೆ, ಸಣ್ಣ ಪ್ರಮಾಣದ ಕೈಗಾರಿಕೆಗಳು ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ವಿರುದ್ಧ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 15 ಜೂನ್ 2010ರಿಂದ ಜನವರಿ 2016ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. 2017ರ ಅಕ್ಟೋಬರ್‌ನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಬಳಿಕ 2019ರಲ್ಲಿ ಮರಳಿ ಬಿಜೆಪಿ ಸೇರಿದ್ದರು. ಇದೀಗ ವಿಜಯಶಂಕರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನು ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ ಎಚ್ ವಿಜಯಶಂಕರ್ ಹಾಗೂ ಅವರ ಪತ್ನಿ ಬಬಿತಾ ವಿಜಯಶಂಕರ್ ಜೊತೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

Follow us on