AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಆಷಾಢ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಮೈಸೂರಿನ ಚಾಮುಂಡೇಶ್ವರಿ ದೇಗುಲ

ಮೂರನೇ ಆಷಾಢ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ಮೈಸೂರಿನ ಚಾಮುಂಡೇಶ್ವರಿ ದೇಗುಲ

ರಾಮ್​, ಮೈಸೂರು
| Edited By: |

Updated on:Jul 31, 2026 | 11:54 AM

Share

ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ 3ನೇ ಆಷಾಢ ಶುಕ್ರವಾರದಂದು ವಿಶೇಷ ಪೂಜೆ ಸಲ್ಲಿಸಲಾಯಿತು. ದೇಗುಲವನ್ನು ಕಮಲ, ಸೇಬು, ಮಾವಿನಕಾಯಿ ಸೇರಿದಂತೆ ವಿವಿಧ ಫಲಪುಷ್ಪಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿತ್ತು. ನಾಡದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಮಹಾಲಕ್ಷ್ಮಿ ಅಲಂಕಾರದಲ್ಲಿ ಸಿಂಗರಿಸಲಾಗಿತ್ತು. ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಮೈಸೂರು, ಜುಲೈ 31: ಚಾಮುಂಡಿಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ನಿಮಿತ್ತ ನಾಡದೇವತೆ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇಗುಲವನ್ನು ಆಕರ್ಷಕ ಫಲಪುಷ್ಪಗಳಿಂದ ಅಲಂಕರಿಸಲಾಗಿತ್ತು. ಗರ್ಭಗುಡಿಯ ಒಳಭಾಗದಲ್ಲಿ ಕಮಲದ ಹೂವು, ಸೇಬು, ಕಿತ್ತಳೆ, ಮೂಸಂಬಿ, ಮಾವಿನ ಎಲೆಗಳಿಂದ ಸಿಂಗರಿಸಲಾಗಿದೆ. ಸಾವಿರಾರು ಭಕ್ತರು ಬೆಳಗ್ಗಿನ ಜಾವದಿಂದಲೇ ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 31, 2026 11:50 AM

Follow Us