Mysuru Chamundeshwari Temple: ಇದೇ ಸೋಮವಾರ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ದಂತಿ

| Updated By: ಆಯೇಷಾ ಬಾನು

Updated on: Jul 07, 2023 | 10:10 AM

ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತ ಸಾಗರವೇ ಹರಿದು ಬಂದಿದೆ. ಸೋಮವಾರದಂದು ಚಾಮುಂಡೇಶ್ವರಿ ಅಮ್ಮನವರ ವರ್ದಂತಿ ಇದೆ ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆ ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಿದ್ದು, ಆಷಾಢ ಮಾಸದ ಮೂರನೇ ವಾರವೂ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ಬದಲಾಗಿ ದರ್ಶನಕ್ಕೆ ಬರೋ ಭಕ್ತರಿಗೆ ₹300 ಹಾಗೂ 50 ರೂ. ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 65 ವರ್ಷ ಮೇಲ್ಪಟ್ಟವರಿಗೆ ₹50 ಟಿಕೆಟ್ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಸೋಮವಾರದಂದು ಚಾಮುಂಡೇಶ್ವರಿ ಅಮ್ಮನವರ ವರ್ದಂತಿ ಇದೆ ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.