ಆಷಾಢ ಮಾಸದ ಮಹತ್ವ, ತಾಯಿ ಚಾಮುಂಡೇಶ್ವರಿಯ ಇತಿಹಾಸ ತಿಳಿಸಿದ ಅರ್ಚಕ

Updated on: Jun 23, 2023 | 9:35 AM

ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ಅರ್ಚಕರು ಆಷಾಢ ಮಾಸದ ಮಹತ್ವ ಹಾಗೂ ದೇವಿಯ ಇತಿಹಾಸವನ್ನು ತಿಳಿಸಿದ್ದಾರೆ ಕೇಳಿ.

ಮೈಸೂರು : ಇಂದು ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ಇನ್ನು ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಅರ್ಚಕರು ಆಷಾಢ ಮಾಸದ ಮಹತ್ವ ಹಾಗೂ ದೇವಿ ಇತಿಹಾಸವನ್ನು ತಿಳಿಸಿದ್ದಾರೆ ಕೇಳಿ.

Published on: Jun 23, 2023 09:11 AM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More