ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ

Edited By:

Updated on: Jan 18, 2026 | 3:04 PM

ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿಗೆ ಒದೆಯಲು ಎಸ್‌ಪಿ ಮುಂದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್​​ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್​ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More