ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಟೀ ಬೆಲೆ 5 ರೂ. ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ

Edited By:

Updated on: Nov 02, 2026 | 12:14 PM

ಹಾಲಿನ ದರ ಏರಿಕೆ ಬಳಿಕ ಮೈಸೂರಿನಲ್ಲಿ ಕಾಫಿ ಮತ್ತು ಟೀ ಬೆಲೆ ಐದು ರೂಪಾಯಿ ಹೆಚ್ಚಳವಾಗಿದೆ. ಒಂದು ಲೀಟರ್ ಹಾಲಿಗೆ ಎಂಟು ರೂಪಾಯಿ ಏರಿಕೆಯಾದ ಬೆನ್ನಲ್ಲೇ, ಒಂದು ಕಪ್ ಕಾಫಿ/ಟೀ ಬೆಲೆ 30 ರೂ.ನಿಂದ 38 ರೂ.ಗೆ ತಲುಪಿದೆ. ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು, ನವೆಂಬರ್ 2: ಹಾಲಿನ ದರ ಏರಿಕೆಯ ಬೆನ್ನಲ್ಲೇ ಮೈಸೂರಿನಲ್ಲಿ ಕಾಫಿ ಮತ್ತು ಚಹಾ ಬೆಲೆಯೂ ಐದು ರೂಪಾಯಿ ಹೆಚ್ಚಾಗಿದೆ. ಲೀಟರ್ ಹಾಲಿಗೆ ಎಂಟು ರೂಪಾಯಿ ಏರಿಕೆ ಶಾಕ್ ನೀಡಿದ ಬೆನ್ನಲ್ಲೇ, ಹೋಟೆಲ್‌ಗಳಲ್ಲಿ ಒಂದು ಕಪ್ ಕಾಫಿ/ಟೀ ಬೆಲೆ 30 ರೂಪಾಯಿಯಿಂದ 38 ರೂಪಾಯಿಗೆ ಏರಿಕೆಗೊಂಡಿದೆ. ಈ ದಿಢೀರ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತೀವ್ರ ಅಸಮಾಧಾನಗೊಂಡಿದ್ದಾರೆ. ಮೈಸೂರಿನ ಪಂಚವಟಿ ಹೋಟೆಲ್‌ನಲ್ಲಿ ಗ್ರಾಹಕರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಹಾಲಿನ ದರ ಏರಿಕೆ ಒಂದೆಡೆಯಾದರೆ, ಇದೀಗ ಕಾಫಿ, ಟೀ ಬೆಲೆಯ ಹೆಚ್ಚಳವು ಗಾಯದ ಮೇಲೆ ಬರೆ ಎಳೆದಂತೆ ಎಂದು ಅವರು ಹೇಳಿದ್ದಾರೆ.

ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಈ ರೀತಿ ಬೆಲೆ ಏರಿಕೆ ಮಾಡುತ್ತಿದೆ ಎಂದು ಗ್ರಾಹಕರು ನೇರವಾಗಿ ಆರೋಪಿಸಿದ್ದಾರೆ. ‘ಇದು ನಮ್ಮ ಜೇಬಿಗೆ ಕತ್ತರಿ ಹಾಕುವಂತಹ ಸರ್ಕಾರ’ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಲೀಟರ್ ಹಾಲಿಗೆ ಎಂಟು ರೂಪಾಯಿ ಹೆಚ್ಚಳವಾಗಿದ್ದರೂ, ಒಂದು ಕಪ್ ಕಾಫಿಗೆ ಐದು ರೂಪಾಯಿ ಹೆಚ್ಚಳ ಮಾಡುವುದು ಅತಿಯಾಗಿದೆ ಎಂದು ಗ್ರಾಹಕರು ಅಭಿಪ್ರಾಯಪಟ್ಟಿದ್ದಾರೆ. ಈ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಪ್ರತಿದಿನದ ಕಾಫಿ, ಟೀ ಸೇವನೆಯನ್ನು ಕಡಿಮೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More