Birthday Boy Yatindra: ಯತೀಂದ್ರ ಸಿದ್ದರಾಮಯ್ಯ ಹುಟ್ಟುಹಬ್ಬ, ಮೈಸೂರು ಇಂದಿರಾ ಕ್ಯಾಂಟೀನ್ ಬಂದವರಿಗೆ ಹೋಳಿಗೆ ಊಟ!

Updated on: Jun 27, 2023 | 11:23 PM

ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವ ಯೋಚನೆ ಕೂಡ ಕಾಂಗ್ರೆಸ್ ನಾಯಕರಿಗಿದೆ.

ಮೈಸೂರು: ನಗರದ ಇಂದಿರಾ ಕ್ಯಾಂಟೀನ್ ಗಳಿಗೆ (Indira canteen) ಇಂದು ಭೇಟಿ ನೀಡಿದವರಿಗೆ ಹೋಳಿಗೆ ಊಟ, ಅದಕ್ಕೆ ಕಾರಣವೂ ವಿಶಿಷ್ಟ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸುಪುತ್ರ ಮತ್ತು ವರುಣಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರಿಗೆ (Yatindra Siddaramaiah) ಇಂದು ಹುಟ್ಟುಹಬ್ಬ. ಯತೀಂದ್ರ ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಜೊತೆಗೆ ಪಕ್ಷದ ಕಾರ್ಯಕರ್ತರು ಇಂದಿರಾ ಕ್ಯಾಂಟೀನ್ ಗಳಿಗೆ ಊಟಕ್ಕೆ ಬಂದವರಿಗೆ ಸಿಹಿ ರೂಪದಲ್ಲಿ ಹೋಳಿಗೆ ತಿನ್ನಿಸಿ ಹುಟ್ಟುಹಬ್ಬ ಆಚರಿಸಿದರು. ಯತೀಂದ್ರ ಈಗ ಅಧಿಕಾರದಲ್ಲಿರದಿದ್ರೂ ಮೈಸೂರು ಜಿಲ್ಲೆಯಲ್ಲಿ ಭಾರೀ ಜನಪ್ರಿಯರು. ಈ ಬಾರಿ ಲೋಕ ಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವ ಯೋಚನೆ ಕೂಡ ಕಾಂಗ್ರೆಸ್ ನಾಯಕರಿಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More