Mysuru Dasara 2023: ಚಾಮುಂಡಿ ಬೆಟ್ಟದಿಂದ ಅರಮನೆಗೆ ಆಗಮಿಸಿದ ಅಮ್ಮನವರ ಉತ್ಸವ ಮೂರ್ತಿ

| Updated By: ಆಯೇಷಾ ಬಾನು

Updated on: Oct 24, 2023 | 12:08 PM

ಚಾಮುಂಡಿ ಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ಅಮ್ಮನವರ ಉತ್ಸವ ಮೂರ್ತಿ ಆಗಮಿಸಿದೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ.

ಮೈಸೂರು, ಅ.24: ಚಾಮುಂಡಿ ಬೆಟ್ಟದಿಂದ ಮೆರವಣಿಗೆ ಮೂಲಕ ಅರಮನೆಗೆ ಅಮ್ಮನವರ ಉತ್ಸವ ಮೂರ್ತಿ ಆಗಮಿಸಿದೆ. ಕಲಾ ತಂಡಗಳೊಂದಿಗೆ ಉತ್ಸವ ಮೂರ್ತಿ ಮೆರವಣಿಗೆ ಮಾಡಿ ಅರಮನೆ ಪ್ರವೇಶ ದ್ವಾರದಲ್ಲಿ ಭಕ್ತರು ಅದ್ಧೂರಿ ಸ್ವಾಗತದೊಂದಿಗೆ ನಾಡ ದೇವತೆ ಚಾಮುಂಡೇಶ್ವರಿಯನ್ನು ಬರಮಾಡಿಕೊಂಡಿದ್ದಾರೆ.

ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಆಗಮಿಸಿರುವ ಪ್ರವಾಸಿಗರು ಈಗಾಗಲೇ ಮೈಸೂರಿನಲ್ಲಿ ಬೀಡುಬಿಟ್ಟಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ. ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ