ನನ್ನ ಗೆಳತಿ ಚಾಮುಂಡಿ ಬೆಟ್ಟಕ್ಕೆ ನನ್ನನ್ನು ಕರ್ಕೊಂಡು ಬರ್ತೀನಿ ಅಂತ ಹರಕೆ ಹೊತ್ತಿದ್ರು; ಬಾನು ಮುಷ್ತಾಕ್ ಮಾತು
ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದ್ದು, ಈ ಮೂಲಕ ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ದಸರಾಗೆ ಚಾಲನೆ ಕೊಟ್ಟ ಬಳಿಕ ಇವರು ಏನೇ ಏರುಪೇರು ಎದುರಾದ್ರೂ ತಾಯಿ ಚಾಮುಂಡಿ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.
ಮೈಸೂರು, ಸೆಪ್ಟೆಂಬರ್ 22: ನಾಡಹಬ್ಬ ಮೈಸೂರು ದಸರಾಗೆ (Mysuru Dasara) ಅಧೀಕೃತ ಚಾಲನೆ ಸಿಕ್ಕಿದೆ. ಸಾಹಿತಿ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದ್ದಾರೆ. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿಯೊಬ್ರು ನನ್ನನ್ನು ಚಾಮುಂಡಿ ಬೆಟ್ಟಕ್ಕೆ ಕರ್ಕೊಂಡು ಬರ್ತೀನಿ ಅಂತ ಹರಕೆ ಹೊತ್ತಿದ್ರು. ಆದರೆ ಕಾರಣಾಂತರಗಳಿಂದ ನನಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಎಷ್ಟೇ ಅಡೆ ತಡೆ ಬಂದ್ರೂ ತಾಯಿ ಚಾಮುಂಡೇಶ್ವರಿ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
