ದಸರಾ ಮಹೋತ್ಸವ: ಇಡೀ ಮೈಸೂರು ಖಾಕಿಮಯ, ಎಲ್ಲೆಲ್ಲೂ ಪೊಲೀಸ್ ಬಂದೋಬಸ್ತ್
ಮೈಸೂರು ದಸರಾಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಭದ್ರತೆಯ ಉಸ್ತುವಾರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ವಹಿಸಿಕೊಂಡಿದ್ದು, ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಮೈಸೂರು, ಸೆಪ್ಟೆಂಬರ್ 22: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಆರಂಭವಾಗುತ್ತಿದ್ದು, ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿರುವ ಖಾಕಿ ಪಡೆ, ಚಾಮುಂಡಿ ಬೆಟ್ಟಕ್ಕೆ ಪ್ರವೇಶಿಸುವವರ ತಪಾಸಣೆ ನಡೆಸುತ್ತಿದೆ. ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ. ಬಾನು ಮಷ್ತಾಕ್ ದಸರಾ ಉದ್ಘಾಟನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಹಾಗೂ ಕೆಲ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಯಾವುದೇ ಸಮಸ್ಯೆಯಾಗದಂತೆ ಭದ್ರತೆ ಹೆಚ್ಚಿಸಲಾಗಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
