ದಸರಾ ಮಹೋತ್ಸವ: ಇಡೀ ಮೈಸೂರು ಖಾಕಿಮಯ, ಎಲ್ಲೆಲ್ಲೂ ಪೊಲೀಸ್ ಬಂದೋಬಸ್ತ್

Edited By:

Updated on: Sep 22, 2025 | 8:42 AM

ಮೈಸೂರು ದಸರಾಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಭದ್ರತೆಯ ಉಸ್ತುವಾರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ವಹಿಸಿಕೊಂಡಿದ್ದು, ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

ಮೈಸೂರು, ಸೆಪ್ಟೆಂಬರ್ 22: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಆರಂಭವಾಗುತ್ತಿದ್ದು, ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗ ಮದ್ಯೆ ಖಾಕಿ ಸರ್ಪಗಾವಲು ಹಾಕಲಾಗಿದೆ. ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬ್ಯಾರಿಕೇಡ್ ಹಾಕಿರುವ ಖಾಕಿ ಪಡೆ, ಚಾಮುಂಡಿ ಬೆಟ್ಟಕ್ಕೆ ಪ್ರವೇಶಿಸುವವರ ತಪಾಸಣೆ ನಡೆಸುತ್ತಿದೆ. ವಿಐಪಿ ಹಾಗೂ ವಿವಿಐಪಿ ಸಂಚಾರ ಇರುವ ಕಾರಣ ಬೈಕ್​ಗಳನ್ನೂ ಬಿಡುತ್ತಿಲ್ಲ. ಓರ್ವ ಡಿಸಿಪಿ, ಇಬ್ಬರು ಎಸಿಪಿ ಸಂಚಾರಿ ಪೊಲೀಸರು ಸೇರಿದಂತೆ ಕೆ.ಎಸ್.ಆರ್.ಪಿ ಹಾಗೂ ಡಿ.ಆರ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಡ್ಯ, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಪೊಲೀಸರನ್ನು ಕರೆಸಿ ನಿಯೋಜನೆ ಮಾಡಲಾಗಿದೆ. ಬಾನು ಮಷ್ತಾಕ್ ದಸರಾ ಉದ್ಘಾಟನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಹಾಗೂ ಕೆಲ ಕನ್ನಡ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆ ಯಾವುದೇ ಸಮಸ್ಯೆಯಾಗದಂತೆ ಭದ್ರತೆ ಹೆಚ್ಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 22, 2025 08:08 AM