ಬಾನು ಮುಸ್ಲಿಮರಾದ್ರೂ ಮನುಷ್ಯರಲ್ಲವೇ, ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು: ಸಿದ್ದರಾಮಯ್ಯ
ಮೈಸೂರು ದಸರಾಗೆ ಇಂದು ವಿದ್ಯುಕ್ತ ಚಾಲನೆ ದೊರಕಿದ್ದು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟಿಸಿದ್ದಾರೆ. ಇನ್ನೂ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾನು ಮುಸ್ಲಿಮರಾದ್ರೂ ಮನುಷ್ಯರಲ್ಲವೇ ಎಂದು ಆಯ್ಕೆ ವಿರೋಧಿಸಿದವರಿಗೆ ತಿರುಗೇಟು ನೀಡಿದ್ದಾರೆ.
ಮೈಸೂರು, ಸೆಪ್ಟೆಂಬರ್ 22: ವಿಶ್ವ ವಿಖ್ಯಾತ ಮೈಸೂರು ದಸರಾಗೆ (Mysuru Dasara) ಇಂದು ವಿದ್ಯುಕ್ತ ಚಾಲನೆ ದೊರಕಿದೆ. ಬೂಕರ್ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರು ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ವಿದ್ಯುಕ್ಯ ಚಾಲನೆ ನೀಡಿದರು. ಇನ್ನೂ ಇನ್ನೂ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, “ಭಾನು ಮುಷ್ತಾಕ್ ಹುಟ್ಟಿನಿಂದ ಮುಸ್ಲಿಮರಾಗಿದ್ರೂ ಅವರು ಮನುಷ್ಯರಲ್ಲವೇ, ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೇ ಹೊರತು ಧರ್ಮ, ಜಾತಿ ಆಧಾರದ ಮೇಲೆ ದ್ವೇಷ ಮಾಡ್ಬಾರ್ದು ಎಂದು ಬಾನು ಆಯ್ಕೆ ವಿರೋಧಿಸಿದವರಿಗೆ ತಿರುಗೇಟನ್ನು ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
