ಮೈಸೂರು ದಸರಾ ಗಜಪಡೆಗೆ ಎಷ್ಟು ಇನ್ಸುರೆನ್ಸ್? ಹೇಗೆ ಕವರ್ ಆಗುತ್ತೆ? ಇಲ್ಲಿದೆ ವಿವರ

Edited By:

Updated on: Aug 06, 2025 | 3:21 PM

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ.

ಮೈಸೂರು, (ಆಗಸ್ಟ್​ 06): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಜಪಡೆ ಕಲರವ ಜೋರಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಸೋಮವಾರ ಸಂಜೆ ಅರಣ್ಯ ಭವನದ ಆವರಣದಲ್ಲಿ ವಾಸ್ತವ್ಯ ಹೂಡಿವೆ. ಈ ಗಜಪಡೆ ಮೈಸೂರಿನಲ್ಲಿರುವಾಗ ಏನಾದರೂ ಹಾನಿ ಸಂಭವಿಸಿದರೆ ಅದರ ನಷ್ಟ ಪರಿಹರಿಸಲು ಅರಣ್ಯ ಇಲಾಖೆಯಿಂದ ಮಾವುತರು, ಕಾವಾಡಿಗಳು ಮತ್ತು ಉಸ್ತುವಾರಿ ಸಿಬ್ಬಂದಿಗೆ 2.04 ಕೋಟಿ ರೂ. ಮೊತ್ತದ ವಿಮೆ (Insurance) ಸೌಲಭ್ಯ ಒದಗಿಸಲಾಗಿದೆ. ಇನ್ನು ದಸರಾ ಗಜಪಡೆಯ ತಂಡದ ಇನ್ಸುರೆನ್ಸ್ ಬಗ್ಗೆ DCF ಪ್ರಭುಗೌಡ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

Published on: Aug 06, 2025 03:16 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More