ಮೈಸೂರು ದಸರಾ 2026: ಸಾಂಸ್ಕೃತಿಕ ನಗರಿಯಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!

Edited By:

Updated on: Oct 11, 2026 | 8:37 AM

ವಿಶ್ವವಿಖ್ಯಾತ ಮೈಸೂರು ದಸರಾ 2026ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿಬೆಟ್ಟದಲ್ಲಿ ಗವಿಸಿದ್ಧೇಶ್ವರ ಶ್ರೀಗಳಿಂದ ವಿದ್ಯುಕ್ತ ಚಾಲನೆ ಸಿಗಲಿದೆ. ಪ್ರಶಸ್ತಿ ಪ್ರದಾನ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಸಾಂಪ್ರದಾಯಿಕ ಕುಸ್ತಿ, ದಸರಾ ಕ್ರೀಡಾಕೂಟ ಮತ್ತು ವಿದ್ಯುತ್ ದೀಪಾಲಂಕಾರ ಸೇರಿದಂತೆ ಹಲವು ಆಕರ್ಷಕ ಕಾರ್ಯಕ್ರಮಗಳು ದಸರಾ ಸಡಗರವನ್ನು ಹೆಚ್ಚಿಸಲಿವೆ.

ಮೈಸೂರು, ಅಕ್ಟೋಬರ್ 11: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ, ಬೆಳಗ್ಗೆ 11.50 ರಿಂದ 12.13 ರ ಶುಭ ಧನುರ್ ಲಗ್ನದಲ್ಲಿ ಗವಿಸಿದ್ಧೇಶ್ವರ ಶ್ರೀಗಳು ದಸರೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ನಾಡಹಬ್ಬ ಶುಭಾರಂಭಗೊಳ್ಳಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

ಉದ್ಘಾಟನೆಯ ದಿನವೇ ಹಲವು ಆಕರ್ಷಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಸಂಜೆ 5 ಗಂಟೆಗೆ ಮೈಸೂರು ಅರಮನೆಯಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿ ರುಕ್ಮಿಣಿ ವಿಜಯ್ ಕುಮಾರ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಇದರ ಜೊತೆಗೆ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಸಾಂಪ್ರದಾಯಿಕ ದಸರಾ ಕುಸ್ತಿ ಮತ್ತು ದಸರಾ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಜಗಮಗಿಸುವ ವಿದ್ಯುತ್ ದೀಪಾಲಂಕಾರವು ನಾಡಹಬ್ಬದ ಸಡಗರವನ್ನು ಇಮ್ಮಡಿಗೊಳಿಸಲಿದೆ. ದಸರಾ ವಸ್ತುಪ್ರದರ್ಶನ ಕೂಡ ಆರಂಭವಾಗಿ, ಪ್ರವಾಸಿಗರನ್ನು ಸೆಳೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More