ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

Edited By:

Updated on: Oct 11, 2026 | 10:06 PM

ಮುಖ್ಯಾಂಶಗಳು

  • ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ
  • ಚೆಸ್ಕಾಂ ವತಿಯಿಂದ ವಿದ್ಯುತ್ ದೀಪಾಲಂಕಾರ ಆಯೋಜನೆ
  • ಲಕ್ಷಾಂತರ ವಿದ್ಯುತ್ ಬಲ್ಬ್‌ಗಳಿಂದ ಸಾಂಸ್ಕೃತಿಕ ನಗರಿ ಅಲಂಕಾರ

ಮೈಸೂರು ದಸರಾ 2026 ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದೆ. ವಿದ್ಯುತ್ ದೀಪಾಲಂಕಾರದಿಂದ ದಸರಾ ವೈಭವ ಇಮ್ಮಡಿಗೊಂಡಿದೆ. ಐತಿಹಾಸಿಕ ಮೈಸೂರು ಅರಮನೆ, ಪ್ರಮುಖ ಬೀದಿಗಳು ಮತ್ತು ಚಾಮುಂಡಿ ಬೆಟ್ಟದಂತಹ ಸ್ಥಳಗಳು ಲಕ್ಷಾಂತರ ದೀಪಗಳಿಂದ ಬೆಳಗುತ್ತಿದ್ದು, ಮೈಸೂರು ನಗರವು ಸ್ವರ್ಗಕ್ಕೆ ಅಪ್ಸರೆಯಂತೆ ಗೋಚರಿಸುತ್ತಿದೆ. ವಿಡಿಯೋ ನೋಡಿ.

ಮೈಸೂರು, ಅಕ್ಟೋಬರ್​​ 11: ನಾಡಿನಾದ್ಯಂತ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬಕ್ಕೆ ಅದ್ಧೂರಿ ಚಾಲನೆ ಕೊಡಲಾಗಿದೆ. ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ವಿದ್ಯುತ್ ದೀಪಾಲಂಕಾರದಿಂದ ಇಡೀ ಮೈಸೂರು ಕಂಗೊಳಿಸುತ್ತಿದೆ. ಲಕ್ಷಾಂತರ ಬಲ್ಬ್‌ಗಳಿಂದ ಅಲಂಕೃತವಾಗಿರುವ ಸಾಂಸ್ಕೃತಿಕ ನಗರಿ, ಸ್ವರ್ಗವೇ ಧರೆಗಿಳಿದು ಬಂದಂತಿದೆ. ಆ ಮೂಲಕ ಈ ವರ್ಷದ ದಸರಾ ಸಂಭ್ರಮವು ಎಂದಿಗಿಂತಲೂ ಹೆಚ್ಚು ವರ್ಣರಂಜಿತವಾಗಿದೆ. ಅರಮನೆಯ ಸುತ್ತಮುತ್ತಲಿನ ರಸ್ತೆಗಳು, ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ಮತ್ತು ಚಾಮುಂಡಿ ಬೆಟ್ಟದ ಪ್ರದೇಶಗಳನ್ನ ವಿದ್ಯುತ್​ ದೀಪಗಳಿಂದ ಅಲಂಕರಿಸಲಾಗಿದೆ. ಐತಿಹಾಸಿಕ ಮೈಸೂರು ಅರಮನೆಯು ದೀಪಾಲಂಕಾರದಲ್ಲಿ ಮಿನುಗುತ್ತಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More