ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ; ಪ್ರಮುಖ ಕಾರ್ಯಕ್ರಮಗಳ ಮುಹೂರ್ತ ಫಿಕ್ಸ್

Updated on: Oct 02, 2026 | 9:50 AM

ಮೈಸೂರು ದಸರಾ 2026ರ ಅಧಿಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 11ರಂದು ದಸರಾ ಉದ್ಘಾಟನೆಗೊಳ್ಳಲಿದೆ. ಅಕ್ಟೋಬರ್ 21ರಂದು ಜಂಬೂ ಸವಾರಿ ಮೆರವಣಿಗೆ ನಡೆಯಲಿದ್ದು, ಇದೇ ಮೊದಲ ಬಾರಿಗೆ ಅಕ್ಟೋಬರ್ 18ರಂದು ಕಂಬಳಕ್ಕೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

2026ರ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಗಳ ಅಧಿಕೃತ ವೇಳಾಪಟ್ಟಿ ಮತ್ತು ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 11ರಂದು ಬೆಳಗ್ಗೆ 11:50 ರಿಂದ 12:13ರ ಶುಭ ಧನುರ್ ಲಗ್ನದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ. ಗವಿಸಿದ್ದೇಶ್ವರ ಶ್ರೀಗಳು ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ. ಶ್ರೀಗಳು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಬೆಳ್ಳಿ ರಥದ ಪಲ್ಲಕ್ಕಿಯಲ್ಲಿರುವ ಮಹಿಷಾಸುರ ಮರ್ದಿನಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.

ಅಕ್ಟೋಬರ್ 21ರಂದು ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 1:36 ರಿಂದ 1:56ರ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದೇ ದಿನ ಸಂಜೆ 4:10 ರಿಂದ 4:30ರ ಶುಭ ಮೀನ ಲಗ್ನದಲ್ಲಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ಸಿಗಲಿದೆ. ಅಕ್ಟೋಬರ್ 13ರಂದು ಯುವ ದಸರಾ ಪ್ರಾರಂಭವಾಗಿ ಐದು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ದಸರಾದಲ್ಲಿ ಹೊಸ ಸೇರ್ಪಡೆಯಾಗಿ ಅಕ್ಟೋಬರ್ 18ರಂದು ಕಂಬಳ ಸ್ಪರ್ಧೆಗೆ ಚಾಲನೆ ಸಿಗಲಿದೆ. ಎರಡು ದಿನಗಳ ಕಾಲ ನಡೆಯುವ ಕಂಬಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Oct 02, 2026 09:42 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More