ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ವಿಧ್ಯುಕ್ತ ಚಾಲನೆ

Edited By:

Updated on: Oct 11, 2026 | 12:50 PM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ಚಾಮುಂಡಿಬೆಟ್ಟದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ ಸಂಗಪ್ಪ ತಂಗಡಗಿ, ಈಶ್ವರ ಖಂಡ್ರೆ, ಅಜಯ್ ಸಿಂಗ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮೈಸೂರು, ಅಕ್ಟೋಬರ್​​ 11: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಧ್ಯುಕ್ತವಾಗಿ ಚಾಲನೆ ದೊರೆತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ ಸಂಗಪ್ಪ ತಂಗಡಗಿ, ಈಶ್ವರ ಖಂಡ್ರೆ, ಅಜಯ್ ಸಿಂಗ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ತನ್ವೀರ್ ಸೇಠ್, ಸಂಸದ ಸುನೀಲ್ ಬೋಸ್ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶರು, ಸಾರ್ವಜನಿಕರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More