AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೇರಪ್ರಸಾರ

Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ನೇರಪ್ರಸಾರ

ಪ್ರಸನ್ನ ಹೆಗಡೆ
|

Updated on: Oct 11, 2026 | 11:39 AM

Share

ಮೈಸೂರು ದಸರಾ ಉದ್ಘಾಟನೆ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಇಂದು ಚಾಮುಂಡಿಬೆಟ್ಟದಲ್ಲಿ ಚಾಲನೆ ನೀಡಿದ್ದಾರೆ. ಬೆಳಗ್ಗೆ 11.50ರಿಂದ 12.13ರ ನಡುವಿನ ಶುಭ ಧನುರ್ ಲಗ್ನದಲ್ಲಿ, ಚಾಮುಂಡೇಶ್ವರಿಯ ಮಹಿಷಾಸುರ ಮರ್ಧಿನಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಬೆಳ್ಳಿ ಪಲ್ಲಕ್ಕಿಯಲ್ಲಿರಿಸಿ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಕಾರ್ಯಕ್ರಮ ಉದ್ಘಾಟಿಸಲಾಗಿದೆ.

ಮೈಸೂರು, ಅಕ್ಟೋಬರ್​​ 11: ಬೆಳಗ್ಗೆ 11.50ರಿಂದ 12.13ರ ನಡುವಿನ ಶುಭ ಧನುರ್ ಲಗ್ನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಚಾಮುಂಡಿಬೆಟ್ಟದಲ್ಲಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಿಎಂ ಡಿಕೆ ಶಿವಕುಮಾರ್​​, ಡಿಸಿಎಂ ಪರಮೇಶ್ವರ್, ಸಚಿವ ಯತೀಂದ್ರ ಸಿದ್ದರಾಮಯ್ಯ, ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ, ನೂರಾರು ಮಠಾಧೀಶರು ಹಾಗೂ ಧರ್ಮಗುರುಗಳು ಭಾಗಿಯಾಗಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಪಾಸ್ ಇದ್ದವರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More