AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2026 Jamboo Savari Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ

Mysuru Dasara 2026 Jamboo Savari Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ

ಪ್ರಸನ್ನ ಹೆಗಡೆ
|

Updated on: Oct 21, 2026 | 1:47 PM

Share

Mysuru Dasara 2026, Jamboo Savari Live Streaming: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆಯುತ್ತಿದೆ. ಪ್ರಶಾಂತ ಆನೆ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತಿದ್ದು, ಅಭಿಮನ್ಯು ನಿಶಾನೆ ಆನೆಯಾಗಿ ಸಾಥ್ ನೀಡಿದ್ದಾನೆ. ಒಟ್ಟು 12 ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ.

ಮೈಸೂರು, ಅಕ್ಟೋಬರ್​​ 21: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ದಸರಾ ಜಂಬೂ ಸವಾರಿಯಲ್ಲಿ 12 ಆನೆಗಳು ಭಾಗಿಯಾಗಲಿದ್ದು, ಕ್ಯಾಪ್ಟನ್​ ಪ್ರಶಾಂತ ಮೊದಲ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಲಿದ್ದಾನೆ. ಪ್ರಶಾಂತನಿಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್​​ ನೀಡಲಿವೆ. ನೌಪತ್ ಆನೆಯಾಗಿ ಗೋಪಿ ಹಾಗೂ ನಿಶಾನೆ ಆನೆಯಾಗಿ ಅಭಿಮನ್ಯು, ಪಟ್ಟದ ಆನೆಯಾಗಿ ಶ್ರೀಕಂಠ, ಸಾಲಾನೆಗಳಾಗಿ ಮಹೇಂದ್ರ, ಶ್ರೀರಾಮ, ಧನಂಜಯ, ಲಕ್ಷ್ಮೀ, ಸುಗ್ರೀವ, ಏಕಲವ್ಯ ಮೆರವಣಿಗೆಯಲ್ಲಿ ಸಾಗಲಿವೆ. 18 ಬಾರಿ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಪ್ರಶಾಂತ ಆನೆಗೆ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ಸಿಕ್ಕಿದೆ. 6 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More