Mysuru Dasara 2026 Jamboo Savari Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Mysuru Dasara 2026, Jamboo Savari Live Streaming: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆಯುತ್ತಿದೆ. ಪ್ರಶಾಂತ ಆನೆ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತಿದ್ದು, ಅಭಿಮನ್ಯು ನಿಶಾನೆ ಆನೆಯಾಗಿ ಸಾಥ್ ನೀಡಿದ್ದಾನೆ. ಒಟ್ಟು 12 ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ.
ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಅದ್ಧೂರಿಯಾಗಿ ನಡೆದಿದೆ. ಜಂಬೂ ಸವಾರಿಯಲ್ಲಿ 12 ಆನೆಗಳು ಭಾಗಿಯಾಗಿದ್ದು, ಕ್ಯಾಪ್ಟನ್ ಪ್ರಶಾಂತ ಮೊದಲ ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದಾನೆ. ಪ್ರಶಾಂತನಿಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ನೌಪತ್ ಆನೆಯಾಗಿ ಗೋಪಿ ಹಾಗೂ ನಿಶಾನೆ ಆನೆಯಾಗಿ ಅಭಿಮನ್ಯು, ಪಟ್ಟದ ಆನೆಯಾಗಿ ಶ್ರೀಕಂಠ, ಸಾಲಾನೆಗಳಾಗಿ ಮಹೇಂದ್ರ, ಶ್ರೀರಾಮ, ಧನಂಜಯ, ಲಕ್ಷ್ಮೀ, ಸುಗ್ರೀವ, ಏಕಲವ್ಯ ಮೆರವಣಿಗೆಯಲ್ಲಿ ಸಾಗಿವೆ. 18 ಬಾರಿ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಪ್ರಶಾಂತ ಆನೆಗೆ ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊರುವ ಜವಾಬ್ದಾರಿ ಸಿಕ್ಕಿದ್ದರೆ, 6 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 21, 2026 01:47 PM
Loading...
Unable to load recommendations.
Follow Us
