AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಜಂಬೂ ಸವಾರಿಗೆ ದಿನಗಣನೆ: ಅರಮನೆ ಆವರಣದಲ್ಲಿ ಭರ್ಜರಿ ತಾಲೀಮು

ವಿಶ್ವವಿಖ್ಯಾತ ಜಂಬೂ ಸವಾರಿಗೆ ದಿನಗಣನೆ: ಅರಮನೆ ಆವರಣದಲ್ಲಿ ಭರ್ಜರಿ ತಾಲೀಮು

ರಾಮ್​, ಮೈಸೂರು
| Edited By: |

Updated on: Oct 19, 2026 | 2:01 PM

Share

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಆವರಣದಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ಆನೆ, ಅಶ್ವಾರೋಹಿ ದಳ ಮತ್ತು ಪೊಲೀಸ್ ಬ್ಯಾಂಡ್‌ನೊಂದಿಗೆ ಅಂತಿಮ ಹಂತದ ತಾಲೀಮು ನಡೆಯುತ್ತಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರು ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಸಂದರ್ಭ ಹೇಗಿರಲಿದೆ ಎಂಬುದರ ರಿಹರ್ಸಲ್ ಇಂದು ನಡೆಸಲಾಯಿತು.

ಮೈಸೂರು, ಅಕ್ಟೋಬರ್ 19: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದೆ. ಜಂಬೂ ಸವಾರಿಗೆ ದಿನಗಣನೆ ಶುರುವಾಗಿದ್ದು, ಅದಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ಬಿರುಸಾಗಿ ನಡೆಯುತ್ತಿವೆ. ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿಯ ಭವ್ಯ ಮೆರವಣಿಗೆಯ ತಾಲೀಮು ನಡೆಯುತ್ತಿದೆ. ಕ್ಯಾಪ್ಟನ್ ಪ್ರಶಾಂತ ಆನೆಯು ಈ ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದೆ. ಅದರ ತಾಲೀಮು ನಡೆಯುತ್ತಿದ್ದು, ಇದರಲ್ಲಿ ಗಜಪಡೆಗಳೊಂದಿಗೆ ಅಶ್ವಾರೋಹಿ ದಳದ ಕುದುರೆಗಳು ಮತ್ತು ಪೊಲೀಸ್ ಬ್ಯಾಂಡ್ ಕೂಡ ಭಾಗವಹಿಸಿವೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಾರಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಚಿನ್ನದ ಅಂಬಾರಿಯಲ್ಲಿ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಶಾಂತ ಆನೆಗೆ ಪುಷ್ಪಾರ್ಚನೆ ಮಾಡುವ ತಾಲೀಮನ್ನು ನಡೆಸಿದರು. ಯಾವುದೇ ಲೋಪವಿಲ್ಲದೆ ಮೆರವಣಿಗೆ ಸಾಗಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕುಶಾಲ ತೋಪು ಸಿಡಿಸುವಿಕೆ ಮತ್ತು ರಾಷ್ಟ್ರಗೀತೆಗೆ ನಮನ ಸಲ್ಲಿಸುವ ಪ್ರಕ್ರಿಯೆಗಳೂ ರಿಹರ್ಸಲ್‌ನ ಭಾಗವಾಗಿದ್ದವು. ಈ ಭವ್ಯ ಮೆರವಣಿಗೆಯು ಅರಮನೆಯಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿಲೋಮೀಟರ್ ದೂರ ಸಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More