AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತನ ಮೇಲೆ ವಿರಾಜಮಾನಾಳಗಿ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ: ಜಂಬೂಸವಾರಿಗೆ ಅಧಿಕೃತ ಚಾಲನೆ

ಪ್ರಶಾಂತನ ಮೇಲೆ ವಿರಾಜಮಾನಾಳಗಿ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ: ಜಂಬೂಸವಾರಿಗೆ ಅಧಿಕೃತ ಚಾಲನೆ

ಪ್ರಸನ್ನ ಗಾಂವ್ಕರ್​
| Edited By: |

Updated on:Oct 21, 2026 | 4:58 PM

Share

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಶುರುವಾಗಿದೆ. ಇದೇ ಮೊದಲ ಬಾರಿಗೆ ಪ್ರಶಾಂತ ಆನೆ 750 ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡಿಯನ್ನು ಹೊತ್ತಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು. ಸಂಸದ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ, ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ, ಕಮಿಷನರ್ ಸೀಮಾ ಲಾಟ್ಕರ್ ಸಹ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.

ಮೈಸೂರು, (ಅಕ್ಟೋಬರ್ 21): ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಶುರುವಾಗಿದೆ. ಇದೇ ಮೊದಲ ಬಾರಿಗೆ ಪ್ರಶಾಂತ ಆನೆ 750 ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡಿಯನ್ನು ಹೊತ್ತಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು. ಸಂಸದ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ, ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ, ಕಮಿಷನರ್ ಸೀಮಾ ಲಾಟ್ಕರ್ ಸಹ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.

ಶುಭ ಮೀನ ಲಗ್ನದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಜಂಬೂಸವಾರಿಗೆ ಚಾಲನೆ ನೀಡಿದ್ದು, ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ ಆನೆ ಚಿನ್ನದ ಅಂಬಾರಿ ಹೊತ್ತು ಸಹಸ್ರಾರು ಜನರ ಮಧ್ಯೆ ಹೆಜ್ಜೆ ಹಾಕುತ್ತಿದ್ದಾನೆ. ಇನ್ನು ತಾಯಿ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನವಾಗಿದ್ದು, ಈ ಜಂಬೂಸವಾರಿ ನೋಡಲು ಜನ ಕಿಕ್ಕಿರಿದು ಸೇರಿದ್ದಾರೆ. ಅರಮನೆಯಿಂದ 5 ಕಿಲೋಮೀಟರ್​ ಇರುವ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಲಿದ್ದು, ಪ್ರಶಾಂತನಿಗೆ ಕುಮ್ಕಿ ಆನೆಗಳಾದ ರೂಪಾ, ಕಾವೇರಿ ಸಾಥ್​ ನೀಡಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 21, 2026 04:51 PM

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More