ಪ್ರಶಾಂತನ ಮೇಲೆ ವಿರಾಜಮಾನಾಳಗಿ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ: ಜಂಬೂಸವಾರಿಗೆ ಅಧಿಕೃತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಶುರುವಾಗಿದೆ. ಇದೇ ಮೊದಲ ಬಾರಿಗೆ ಪ್ರಶಾಂತ ಆನೆ 750 ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡಿಯನ್ನು ಹೊತ್ತಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು. ಸಂಸದ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ, ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ, ಕಮಿಷನರ್ ಸೀಮಾ ಲಾಟ್ಕರ್ ಸಹ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.
ಮೈಸೂರು, (ಅಕ್ಟೋಬರ್ 21): ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಶುರುವಾಗಿದೆ. ಇದೇ ಮೊದಲ ಬಾರಿಗೆ ಪ್ರಶಾಂತ ಆನೆ 750 ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡಿಯನ್ನು ಹೊತ್ತಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು. ಸಂಸದ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ, ಮೈಸೂರು ಡಿಸಿ ಲಕ್ಷ್ಮೀಕಾಂತರೆಡ್ಡಿ, ಕಮಿಷನರ್ ಸೀಮಾ ಲಾಟ್ಕರ್ ಸಹ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು.
ಶುಭ ಮೀನ ಲಗ್ನದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಜಂಬೂಸವಾರಿಗೆ ಚಾಲನೆ ನೀಡಿದ್ದು, ಮೊದಲ ಬಾರಿಗೆ ಕ್ಯಾಪ್ಟನ್ ಪ್ರಶಾಂತ ಆನೆ ಚಿನ್ನದ ಅಂಬಾರಿ ಹೊತ್ತು ಸಹಸ್ರಾರು ಜನರ ಮಧ್ಯೆ ಹೆಜ್ಜೆ ಹಾಕುತ್ತಿದ್ದಾನೆ. ಇನ್ನು ತಾಯಿ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನವಾಗಿದ್ದು, ಈ ಜಂಬೂಸವಾರಿ ನೋಡಲು ಜನ ಕಿಕ್ಕಿರಿದು ಸೇರಿದ್ದಾರೆ. ಅರಮನೆಯಿಂದ 5 ಕಿಲೋಮೀಟರ್ ಇರುವ ಬನ್ನಿಮಂಟಪದವರೆಗೆ ಜಂಬೂಸವಾರಿ ಸಾಗಲಿದ್ದು, ಪ್ರಶಾಂತನಿಗೆ ಕುಮ್ಕಿ ಆನೆಗಳಾದ ರೂಪಾ, ಕಾವೇರಿ ಸಾಥ್ ನೀಡಿವೆ.
