AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ 2026: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶುಭಸುದ್ದಿ, ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ ಬಸ್ ಸೇವೆ

ದಸರಾ 2026: ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಶುಭಸುದ್ದಿ, ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ ಬಸ್ ಸೇವೆ

ಕಿರಣ್​ ಸೂರ್ಯ
| Edited By: |

Updated on: Oct 09, 2026 | 6:35 AM

Share

ದಸರಾ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಶುಭಸುದ್ದಿ ಲಭಿಸಿದೆ. ಅಕ್ಟೋಬರ್ 16 ರಿಂದ 27 ರವರೆಗೆ ರಾಜ್ಯಾದ್ಯಂತ 3,000 ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ 700 ವಿಶೇಷ ಬಸ್‌ಗಳು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫ್ಲೈ ಬಸ್‌ಗಳು ಹಾಗೂ ಮೈಸೂರಿನಿಂದ ಒಂದು ದಿನದ ಪ್ಯಾಕೇಜ್ ಲಭ್ಯವಿರಲಿದೆ.

ಬೆಂಗಳೂರು, ಅಕ್ಟೋಬರ್ 9: ಮೈಸೂರು ದಸರಾ 2026 ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಪ್ರಯಾಣಿಕರಿಗೆ ಶುಭಸುದ್ದಿ ನೀಡಿದೆ. ಅಕ್ಟೋಬರ್ 16 ರಿಂದ ಅಕ್ಟೋಬರ್ 27 ರವರೆಗೆ ರಾಜ್ಯಾದ್ಯಂತ ಹೆಚ್ಚುವರಿ ಬಸ್ ಸೇವೆಗಳನ್ನು ಕಲ್ಪಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಅವಧಿಯಲ್ಲಿ ಒಟ್ಟು 3,000 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್​ಗಳನ್ನು ನಿಯೋಜಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ವಿಶೇಷವಾಗಿ, ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವವರಿಗೆ 700 ವಿಶೇಷ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ರಾಜಧಾನಿಯಿಂದ ದಸರಾ ಮಹೋತ್ಸವಕ್ಕೆ ತೆರಳುವವರ ಸಂಖ್ಯೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಬೆಂಗಳೂರು) ಮೈಸೂರಿಗೆ ಫ್ಲೈ ಬಸ್ ಸೇವೆಗಳನ್ನು ಸಹ ಪ್ರಾರಂಭಿಸಲಾಗಿದೆ. ಮೈಸೂರಿನಿಂದ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಲು ಇಚ್ಛಿಸುವವರಿಗೆ ಅನುಕೂಲವಾಗುವಂತೆ ಒಂದು ದಿನದ ಕೆಎಸ್ಆರ್ಟಿಸಿ ಪ್ಯಾಕೇಜ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಮೈಸೂರು ದಸರಾ 2026ರ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಎಸ್ಆರ್ಟಿಸಿ ವಿವಿಧ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More