ಮಾವುತರ ಜೊತೆ ಉಪಯಾರ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದೇಕೆ ಸಚಿವ ಯತೀಂದ್ರ?: ಕಾರಣ ಇಲ್ಲಿದೆ
ಮೈಸೂರು ದಸರಾ ಹಿನ್ನೆಲೆ ಆಯೋಜಿಸಲಾಗಿದ್ದ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್ ವಿತರಣೆ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಕ್ಕೆ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸಚಿವ ಯತೀಂದ್ರ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಹೊಸ ಮನೆ ವ್ಯವಸ್ಥೆ ಮತ್ತು ತಾಯಿಯವರ ಗೈರುಹಾಜರಿಯಿಂದ ತಡವಾಯಿತೇ ಹೊರತು ಉದ್ದೇಶಪೂರ್ವಕವಲ್ಲ ಎಂದು ಅವರು ತಿಳಿಸಿದ್ದಾರೆ.
ಮೈಸೂರು, ಸೆಪ್ಟೆಂಬರ್ 28: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆ ಆಯೋಜಿಸಲಾಗಿದ್ದ ದಸರಾ ಗಜಪಡೆ ಮಾವುತರು, ಕಾವಾಡಿಗಳಿಗೆ ಉಪಾಹಾರ ಮತ್ತು ಕಿಟ್ ವಿತರಣೆ ಕಾರ್ಯಕ್ರಮಕ್ಕೆ ತಡವಾಗಿ ಬಂದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ಹೊಸ ಮನೆ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಮನೆಯಲ್ಲಿ ಅಮ್ಮ ಇರಲಿಲ್ಲ, ಕೆಲಸಗಾರರೂ ಇರಲಿಲ್ಲ. ಹೀಗಾಗಿ ಕೆಲವೊಂದಿಷ್ಟು ವ್ಯವಸ್ಥೆ ಮಾಡಿ ಬರುವುದರಲ್ಲಿ ತಡವಾಯಿತು. ಉದ್ದೇಶಪೂರ್ವಕವಾಗಿ ನಾನು ತಡವಾಗಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಸಚಿವರು 9.30 ಆದರೂ ಬಾರದ ಬಗ್ಗೆ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿಗೆ ಕರೆಮಾಡಿ ಟೈಂ ಸೆನ್ಸ್ ಇಲ್ವೇನ್ರೀ, ಟೈಂ ಸೆನ್ಸ್ ಇಲ್ಲಂದ್ರೆ ಏನ್ಮಾಡಬೇಕು? ಎಲ್ಲದಕ್ಕೂ ಒಂದು ಮಿತಿ ಇರುತ್ತದೆ ಎಂದು ಸಚಿವರ ವಿರುದ್ಧ ಗರಂ ಆಗಿದ್ದರು. ಹೀಗಾಗಿ ತಡವಾಗಿ ಕಾರ್ಯಕ್ರಮಕ್ಕೆ ಬಂದ ಸಚಿವರು ಆ ಸಂಬಂಧ ಸ್ಪಷ್ಟನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 28, 2026 12:07 PM
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ

