ಜಂಬೂಸವಾರಿ ಯಶಸ್ವಿ: 18 ವರ್ಷ ಕಾದಿದ್ದಕ್ಕೆ ಸಿಕ್ತು ಫಲ, ಚಾಮುಂಡಿಯನ್ನು ಹೊತ್ತು ಮೆರೆಸಿದ ಪ್ರಶಾಂತ

Updated on: Oct 21, 2026 | 8:39 PM

ವಿಶ್ವವಿಖ್ಯಾತ ಮೈಸೂರು ದಸರಾದ ಆಕರ್ಷಣೆಯಾಗಿದ್ದ ಜಂಬೂಸವಾರಿ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಮೊದಲ ಬಾರಿಗೆ 750 ಕೆಜಿ ತೂಕದ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಪ್ರಶಾಂತ ರಾಜಬೀದಿಗಳಲ್ಲಿ ಗಜಗಾಂಭೀರ್ಯದಿಂದ ಯಶಸ್ವಿಯಾಗಿ ಬನ್ನಿಮಂಟಪ ತಲುಪಿದ್ದಾನೆ. ಇಂದು (ಅ.21) ಸಂಜೆ 4.31ಕ್ಕೆ ಅರಮನೆಯಿಂದ ಹೊರಟಿದ್ದ ಜಂಬೂಸವಾರಿ ಸಂಜೆ 6.31ಕ್ಕೆ ಬನ್ನಿಮಂಟಪ ತಲುಪಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂಬಾರಿಯಲ್ಲಿ ವಿರಾಜಮಾನವಾಗಿದ್ದ ತಾಯಿ ಚಾಮುಂಡೇಶ್ವರಿ ಹೊತ್ತು ಮೆರೆಸಿದ ಪ್ರಶಾಂತ ಆನೆ, 2 ಗಂಟೆಯಲ್ಲಿ 5 ಕಿ.ಮೀ. ದೂರ ಕ್ರಮಿಸಿದ್ದಾನೆ.

ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾದ ಆಕರ್ಷಣೆಯಾಗಿದ್ದ ಜಂಬೂಸವಾರಿ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಮೊದಲ ಬಾರಿಗೆ 750 ಕೆಜಿ ತೂಕದ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಪ್ರಶಾಂತ ರಾಜಬೀದಿಗಳಲ್ಲಿ ಗಜಗಾಂಭೀರ್ಯದಿಂದ ಯಶಸ್ವಿಯಾಗಿ ಬನ್ನಿಮಂಟಪ ತಲುಪಿದ್ದಾನೆ. ಇಂದು (ಅ.21) ಸಂಜೆ 4.31ಕ್ಕೆ ಅರಮನೆಯಿಂದ ಹೊರಟಿದ್ದ ಜಂಬೂಸವಾರಿ ಸಂಜೆ 6.31ಕ್ಕೆ ಬನ್ನಿಮಂಟಪ ತಲುಪಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಅಂಬಾರಿಯಲ್ಲಿ ವಿರಾಜಮಾನವಾಗಿದ್ದ ತಾಯಿ ಚಾಮುಂಡೇಶ್ವರಿ ಹೊತ್ತು ಮೆರೆಸಿದ ಪ್ರಶಾಂತ ಆನೆ, 2 ಗಂಟೆಯಲ್ಲಿ 5 ಕಿ.ಮೀ. ದೂರ ಕ್ರಮಿಸಿದ್ದಾನೆ. ಇದರೊಂದಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದೇ ಜಂಬುಸವಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇನ್ನು ರಸ್ತೆಯದ್ದಕ್ಕೂ ನೆರೆದಿದ್ದ ಲಕ್ಷಾಂತರ ಜನ ಜಂಬುಸವಾರಿಯನ್ನು ಕಣ್ತುಂಬಿಕೊಂಡರು. ಇನ್ನು 18 ವರ್ಷಗಳ ಬಳಿಕ ಪ್ರಶಾಂತ ಆನೆಗೆ ಅಂಬಾರಿ ಹೊರುವ ಪುಣ್ಯ ಸಿಕ್ಕಿದ್ದು, ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 21, 2026 08:30 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More