ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ರಾಜವಂಶಸ್ಥರಿಗೆ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ಕ್ಕಾಗಿ ಜಿಲ್ಲಾಡಳಿತವು ರಾಜವಂಶಸ್ಥರಿಗೆ ಸಾಂಪ್ರದಾಯಿಕ ಆಹ್ವಾನವನ್ನು ನೀಡಿದೆ. ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರಿಗೆ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹಸ್ತಾಂತರಿಸಿದ್ದಾರೆ. ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಈ ವೇಳೆ ಶಾಸಕ ಶ್ರೀವತ್ಸ, ಡಿಸಿ ಲಕ್ಷ್ಮಿಕಾಂತ್ ರೆಡ್ಡಿ, ಎಡಿಸಿ ಐಶ್ವರ್ಯಾ, ಜಿ.ಪಂ. ಸಿಇಒ ಯುಕೇಶ್ ಕುಮಾರ್, ಕಮಿಷನರ್ ಸೀಮಾ ಲಾಟ್ಕರ್ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಉಪಸ್ಥಿತರಿದ್ದರು.
ಮೈಸೂರು, ಅಕ್ಟೋಬರ್ 02: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ರಾಜವಂಶಸ್ಥರನ್ನು ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆಹ್ವಾನಿಸಿದೆ. ಪ್ರಮೋದಾದೇವಿ ಒಡೆಯರ್ ಅವರಿಗೆ ದಸರಾ ಆಹ್ವಾನ ಪತ್ರಿಕೆ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಆಹ್ವಾನಿಸಿದ್ದಾರೆ. ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಈ ವೇಳೆ ಶಾಸಕ ಶ್ರೀವತ್ಸ, ಡಿಸಿ ಲಕ್ಷ್ಮಿಕಾಂತ್ ರೆಡ್ಡಿ, ಎಡಿಸಿ ಐಶ್ವರ್ಯಾ, ಜಿ.ಪಂ. ಸಿಇಒ ಯುಕೇಶ್ ಕುಮಾರ್, ಕಮಿಷನರ್ ಸೀಮಾ ಲಾಟ್ಕರ್ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಉಪಸ್ಥಿತರಿದ್ದರು. ಸಂಪ್ರದಾಯದಂತೆ ಪ್ರಮೋದಾದೇವಿ ಒಡೆಯರ್ಗೆ ಆಹ್ವಾನ ಕೊಟ್ಟಿದ್ದೇವೆ. ಅವರು ಕೂಡ ಬಹಳ ಸಂತೋಷದಿಂದ ಆಹ್ವಾನ ಸ್ವೀಕರಿಸಿದರು. ದಸರಾ ಮಹೋತ್ಸವಕ್ಕೆ ಸಂಪೂರ್ಣ ಸಹಕಾರ ಕೊಡೋದಾಗಿ ಹೇಳಿದ್ದಾರೆ ಎಂದು ಸಚಿವ ಯತೀಂದ್ರ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 02, 2026 01:24 PM
Loading...
Unable to load recommendations.
Follow Us
