ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರುವ ಪ್ರಶಾಂತ ಆನೆಗೆ ವಿಶೇಷ ಮಜ್ಜನ, ಆರೈಕೆ

Edited By:

Updated on: Oct 21, 2026 | 10:41 AM

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ 2026ರ ಸಿದ್ಧತೆಗಳು ಬಿರುಸಿನಿಂದ ಸಾಗಿವೆ. ಚಿನ್ನದ ಅಂಬಾರಿ ಹೊರುವ ಪ್ರಮುಖ ಆಕರ್ಷಣೆ ಪ್ರಶಾಂತ ಆನೆಗೆ ವಿಶೇಷ ಆರೈಕೆ, ಮಜ್ಜನ ಹಾಗೂ ಪ್ರೋಟೀನ್‌ ಆಹಾರ ನೀಡಲಾಗುತ್ತಿದೆ. ಜಂಬೂಸವಾರಿ ನಾಯಕನಾಗಿರುವ ಪ್ರಶಾಂತನ ಅಲಂಕಾರವೂ ವಿಶೇಷವಾಗಿರಲಿದೆ. ಒಟ್ಟು 12 ಆನೆಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ 2026ರ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚಿನ್ನದ ಅಂಬಾರಿ ಹೊರುವ ಪ್ರಮುಖ ಆಕರ್ಷಣೆಯಾಗಿರುವ ಪ್ರಶಾಂತ ಆನೆಗೆ ವಿಶೇಷ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಲ್ಲ ಆನೆಗಳ ಅಲಂಕಾರದ ನಡುವೆ, ಪ್ರಶಾಂತನಿಗೆ ಮಾವುತರು ಪ್ರತ್ಯೇಕವಾಗಿ ಮಜ್ಜನ ಮಾಡಿಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಪ್ರೋಟೀನ್ ಯುಕ್ತ ಪೌಷ್ಟಿಕ ಆಹಾರವನ್ನು ನೀಡಲಾಗಿದ್ದು, ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳಲಾಗುತ್ತಿದೆ.

ಇದೇ ಮೊದಲ ಬಾರಿಗೆ ಪ್ರಶಾಂತ ಆನೆ ಜಂಬೂಸವಾರಿ ನಾಯಕನಾಗಿ ಚಿನ್ನದ ಅಂಬಾರಿ ಹೊರುತ್ತಿದ್ದು, ಈ ಹಿಂದೆ 18 ಬಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಅನುಭವವಿದೆ. ರಾಜವಂಶಸ್ಥರ ಸಂಪ್ರದಾಯದಂತೆ ಪ್ರಶಾಂತನಿಗೆ ಅರ್ಧಚಂದ್ರಾಕೃತಿ ಹಾಗೂ ಗಂಡಭೇರುಂಡ ಚಿತ್ತಾರದಂತಹ ವಿಶೇಷ ಅಲಂಕಾರ ಮಾಡಲಾಗುತ್ತದೆ. ಮೆರವಣಿಗೆಯಲ್ಲಿ ಅಭಿಮನ್ಯು ನಿಶಾನೆ ಆನೆಯಾಗಿ, ಗೋಪಿ ನೌಪತ್ ಆನೆಯಾಗಿ, ಮಹೇಂದ್ರ, ಧನಂಜಯ, ಶ್ರೀರಾಮ, ಶ್ರೀಕಂಠ, ಲಕ್ಷ್ಮಿ, ಚೈತ್ರಾ ಸಾಲ್ ಆನೆಗಳಾಗಿ ಸಾಗಲಿವೆ. ರೂಪಾ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜೊತೆಗಿರುತ್ತವೆ. ಅರಮನೆಯಲ್ಲಿ ದಸರಾ ಸಂಭ್ರಮ ಸಡಗರ ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More