ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ವಿಶ್ವ ವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದ್ದು, ಎಲ್ಲರ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಜಂಬೂಸವಾರಿ ನಡೆಯಲಿದ್ದು, ಇದೇ ಮೊದಲ ಬಾರಿಗೆ ಪ್ರಶಾಂತ ಆನೆ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಇನ್ನು ಇದಕ್ಕೂ ಮುನ್ನ ಇಂದು ಅ.20)ಅಂಬಾರಿ ಹೊರುವ ಹಾಗೂ ಕುಮ್ಕಿ ಆನೆಗಳಿಗೆ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಾಯ್ತು. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಸಂಪ್ರದಾಯದಂತೆ ಪ್ರಶಾಂತ, ಕಾವೇರಿ, ರೂಪಾ ಆನೆಗಳಿಗೆ ಪೂಜೆ ಮಾಡಲಾಯ್ತು.
ಮೈಸೂರು, (ಅಕ್ಟೋಬರ್ 20): ವಿಶ್ವ ವಿಖ್ಯಾತ ಮೈಸೂರು ದಸರಾ ಕಳೆಗಟ್ಟಿದ್ದು, ಎಲ್ಲರ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ನಾಳೆ ಅಂದರೆ ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಜಂಬೂಸವಾರಿ ನಡೆಯಲಿದ್ದು, ಇದೇ ಮೊದಲ ಬಾರಿಗೆ ಪ್ರಶಾಂತ ಆನೆ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದ್ದಾನೆ. ಇನ್ನು ಇದಕ್ಕೂ ಮುನ್ನ ಇಂದು ಅ.20)ಅಂಬಾರಿ ಹೊರುವ ಹಾಗೂ ಕುಮ್ಕಿ ಆನೆಗಳಿಗೆ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಪೂಜೆ ಸಲ್ಲಿಸಲಾಯ್ತು. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಸಂಪ್ರದಾಯದಂತೆ ಪ್ರಶಾಂತ, ಕಾವೇರಿ, ರೂಪಾ ಆನೆಗಳಿಗೆ ಪೂಜೆ ಮಾಡಲಾಯ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

