ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಅಧಿಕೃತ ಚಾಲನೆ!

Updated on: Oct 11, 2026 | 11:24 AM

ಮೈಸೂರು ದಸರಾ ನಾಡಹಬ್ಬಕ್ಕೆ ಗವಿಸಿದ್ದೇಶ್ವರ ಶ್ರೀಗಳು ಚಾಲನೆ ನೀಡಲಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆಯಾಗಲಿದ್ದು, ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅರಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣಧಾರಣೆ ಮಾಡಿ, ರತ್ನಖಚಿತ ಸಿಂಹಾಸನ ಏರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಇದು ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ವೈಭವವನ್ನು ಅನಾವರಣಗೊಳಿಸಲಿದೆ.

ನಾಡಹಬ್ಬ ಮೈಸೂರು ದಸರಾಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಡೇ ಸಂಭ್ರಮದಲ್ಲಿದೆ. ಈ ಬಾರಿ ದಸರಾ ಉದ್ಘಾಟನೆಯು ಅತ್ಯಂತ ವಿಶೇಷವಾಗಿದ್ದು, ಕೊಪ್ಪಳದ ಅನ್ನದಾಸೋಹಿ, ಅಕ್ಷರ ದಾಸೋಹಿ ಅಭಿನವ ಗವಿಸಿದ್ದೇಶ್ವರ ಶ್ರೀಗಳು ನಾಡಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಬೆಳಗ್ಗೆ 11:50 ರಿಂದ 12:13ರ ಧನುರ್ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಮೈಸೂರು ಅರಮನೆಯಲ್ಲಿ ರಾಜಪರಂಪರೆಯ ದಸರಾ ಆಚರಣೆಗಳು ಪ್ರಾರಂಭವಾಗಲಿವೆ. ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಂಕಣಧಾರಣೆ ಮಾಡಿ, ರತ್ನಖಚಿತ ಸಿಂಹಾಸನದ ಸಿಂಹಮುಖ ಜೋಡಣೆ ಮಾಡಿ, ಶುಭ ಲಗ್ನದಲ್ಲಿ ಸಿಂಹಾಸನಾರೋಹಣಗೈದು ಖಾಸಗಿ ದರ್ಬಾರ್ ನಡೆಸಲಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Published on: Oct 11, 2026 11:23 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More