ಮೈಸೂರು ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗುವ ಸಿಎಂ, ಡಿಸಿಎಂಗೆ ವಿಶೇಷ ಉಡುಗೊರೆ ಸಿದ್ಧ: ಹೇಗಿದೆ ನೋಡಿ

Edited By:

Updated on: Oct 02, 2025 | 8:57 AM

ಮೈಸೂರು ದಸರಾ 2025ರ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ವರ್ಷದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮೈಸೂರಿನ ಕಲಾವಿದ ರಾಜೇಶ್ ಅಪರೂಪದ ಉಡುಗೊರೆಯನ್ನು ಸಿದ್ಧಪಡಿಸಿದ್ದಾರೆ. ಏನದು ವಿಶೇಷ ಉಡುಗೊರೆ? ಇಲ್ಲಿದೆ ವಿಡಿಯೋ ನೋಡಿ.

ಮೈಸೂರು, ಅಕ್ಟೋಬರ್ 2: ಮೈಸೂರು ದಸರಾ ಜಂಬೂಸವಾರಿ 2025ರ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೊಡುವುದಕ್ಕಾಗಿ ಮೈಸೂರಿನ ಕಲಾವಿದ ರಾಜೇಶ್ ಅವರು ಗೆ ವಿಶೇಷ ಉಡುಗೊರೆ ಸಿದ್ದಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೀಡಲು ಅವರ ಮನೆದೇವರಾದ ಸಿದ್ದರಾಮೇಶ್ವರನ ಮೂರ್ತಿ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ನೀಡಲು ಕೆಂಕೇರಮ್ಮ ಮೂರ್ತಿಯನ್ನು ಪಂಚಲೋಹದಲ್ಲಿ ನಿರ್ಮಿಸಲಾಗಿದೆ. ಈ ಅಪರೂಪದ ಕಾಣಿಕೆಯು ಕಲಾವಿದ ರಾಜೇಶ್ ಅವರ ಪ್ರೀತಿ ಮತ್ತು ಕಲಾತ್ಮಕತೆಯನ್ನು ಪ್ರತಿಬಿಂಬಿಸುತ್ತದೆ. ಈ ಹಿಂದೆ ಹೆಚ್​ಡಿ ಕುಮಾರಸ್ವಾಮಿ, ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ರಾಜೇಶ್ ಇದೇ ರೀತಿ ಉಡುಗೊರೆಗಳನ್ನು ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 02, 2025 08:56 AM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More