AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು

ಪ್ರಸನ್ನ ಹೆಗಡೆ
|

Updated on:Oct 21, 2026 | 3:45 PM

Share

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ 16 ಜಿಲ್ಲೆಗಳು ಹಾಗೂ ಕೇಂದ್ರ-ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಒಟ್ಟು 60 ಸ್ತಬ್ಧಚಿತ್ರಗಳು ಕಣ್ಮನ ಸೆಳೆದಿದ್ದು, ವಿವಿಧ ಕಲಾತಂಡಗಳ ಸಾಂಸ್ಕೃತಿಕ ಪ್ರದರ್ಶನಗಳು ಮೆರುಗು ನೀಡಿದವು. ದಸರಾ ಮೆರವಣಿಗೆಯಲ್ಲಿ ಹೊರ ರಾಜ್ಯದ ಸ್ತಬ್ಧ ಚಿತ್ರಗಳಿಗೂ ಅವಕಾಶ ನೀಡಲಾಗಿರೋದು ವಿಶೇಷವಾಗಿತ್ತು.

ಮೈಸೂರು, ಅಕ್ಟೋಬರ್​​ 21: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೂ ಮುನ್ನ ನಡೆದ ಸ್ತಬ್ಧ ಚಿತ್ರಗಳ ಮೆರವಣಿಗೆ ನೋಡುಗರ ಕಣ್ಮನ ಸೆಳೆದಿವೆ. ಮೆರವಣಿಗೆಯಲ್ಲಿ 16 ಜಿಲ್ಲೆಗಳ, ರಾಜ್ಯ ಸರ್ಕಾರದ 18 ಮತ್ತು ಕೇಂದ್ರ ಸರ್ಕಾರದ 11 ಸೇರಿ ಒಟ್ಟು 60 ಸ್ತಬ್ಧಚಿತ್ರಗಳು ಪ್ರದಶರ್ಶನಗೊಂಡಿವೆ. ದಸರಾ ಮೆರವಣಿಗೆಯಲ್ಲಿ ಹೊರ ರಾಜ್ಯದ ಸ್ತಬ್ಧ ಚಿತ್ರಗಳಿಗೂ ಅವಕಾಶ ನೀಡಲಾಗಿದ್ದು, ಕೀಲುಕುದುರೆ, ಗೊರವರ ಕುಣಿತ, ಡೊಳ್ಳು ಕುಣಿತ, ಯಕ್ಷಗಾನ, ಕೀಲುಗೊಂಬೆ, ಮರಗಾಲು, ವೀರಗಾಸೆ, ಹಾಡಿಮಕ್ಕಳ ನೃತ್ಯ ಸೇರಿ ಹಲವು ಸಾಂಸ್ಕೃತಿಕ ಪ್ರದರ್ಶನಗಳು ನೆರವೇರಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 21, 2026 03:44 PM

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More