ಮೈಸೂರು ದಸರಾ ಕಂಬಳ: ಉಚಿತ ಪ್ರವೇಶ, ಆಸನ ವ್ಯವಸ್ಥೆ ಮತ್ತು ಕಾರ್ಯಕ್ರಮ ನಿರ್ವಹಣಾ ಯೋಜನೆಗಳು

Edited By:

Updated on: Oct 02, 2026 | 4:54 PM

ಮೈಸೂರು ದಸರಾ ಕಂಬಳ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿರಲಿದ್ದು, 8,000 ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಇದು 48 ಗಂಟೆಗಳ ಕಾಲ ನಡೆಯಲಿದ್ದು, ಮುಖ್ಯಮಂತ್ರಿಗಳು ಸಹ ಭಾಗವಹಿಸುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯ ಪ್ರವಾಸಿಗರಿಗೂ ಪ್ರತ್ಯೇಕ ಪಾಸ್ ಕೌಂಟರ್ ಇರಲಿದೆ. ಜನಸಂದಣಿ ನಿಯಂತ್ರಣಕ್ಕೆ ಆನ್‌ಲೈನ್ ಪಾಸ್ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆದಿದೆ.

ಮೈಸೂರು, ಅ.2:  ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಕರಾವಳಿ ಭಾಗದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಸುಮಾರು 25 ರಿಂದ 30 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇರಲಿದ್ದು, ವೀಕ್ಷಕರಿಗೆ ಸುಗಮ ಅನುಭವ ನೀಡಲು ಸಮಗ್ರ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು 8,000 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಪಾಸ್‌ಗಳ ಮೂಲಕ ಪ್ರವೇಶ ನೀಡಲಾಗುವುದು. ಜೊತೆಗೆ, ಒಂದೇ ಬಾರಿಗೆ 5,000 ಜನರಿಗೆ ನಿಂತು ವೀಕ್ಷಿಸಲು ಸಹ ಅವಕಾಶವಿದೆ. ಕಾರ್ಯಕ್ರಮದ ಸ್ಥಳದಲ್ಲಿ ಕುಟುಂಬ ಸಮೇತ ಭೇಟಿ ನೀಡುವವರಿಗೆ ಸೆಲ್ಫಿ ಮತ್ತು ಫೋಟೋ ತೆಗೆಸಿಕೊಳ್ಳಲು ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗುತ್ತಿದೆ. ಕಂಬಳವು 48 ಗಂಟೆಗಳ ಕಾಲ ನಿರಂತರವಾಗಿ ನಡೆಯಲಿದ್ದು, ಭಾನುವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿದೇಶಿ ಪ್ರವಾಸಿಗರಿಗೆ ಪ್ರತ್ಯೇಕ ಪಾಸ್ ಕೌಂಟರ್ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಕಂಬಳವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡುವ ಗುರಿ ಹೊಂದಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More