ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್: ತಪ್ಪಿದ ಭಾರಿ ಅನಾಹುತ!

Edited By:

Updated on: Oct 03, 2026 | 4:05 PM

ಮೈಸೂರು ದಸರಾ ಉದ್ಘಾಟನೆಗೂ ಮುನ್ನವೇ ಗನ್ ಹೌಸ್ ವೃತ್ತದ ಬಳಿ ವಿದ್ಯುತ್ ದೀಪಾಲಂಕಾರದ ಬೃಹತ್ ಕಟೌಟ್ ಏಕಾಏಕಿ ಟಿಟಿ ವಾಹನದ ಮೇಲೆ ಮುರಿದು ಬಿದ್ದು ಭಾರಿ ಅನಾಹುತ ತಪ್ಪಿದೆ. ಕೇವಲ ಅರ್ಧ ಅಡಿ ಹಳ್ಳ ತೆಗೆದು ಕಟೌಟ್ ನೆಟ್ಟಿದ್ದ ಗುತ್ತಿಗೆದಾರರ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು, ಅಕ್ಟೋಬರ್ 03: ಮೈಸೂರು ದಸರಾ ಮಹೋತ್ಸವದ ಆರಂಭದಲ್ಲೇ ನಗರದ ಗನ್ ಹೌಸ್ ವೃತ್ತದ ಬಳಿ ವಿದ್ಯುತ್ ದೀಪಾಲಂಕಾರದ ಬೃಹತ್ ಲೈಟ್ ಕಟೌಟ್ ಏಕಾಏಕಿ ಮುರಿದು ಬಿದ್ದು ಭಾರಿ ಅನಾಹುತವೊಂದು ತಪ್ಪಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ನಿಂತಿದ್ದ ಟಿಟಿ (TT) ವಾಹನದ ಮೇಲೆ ಕಟೌಟ್ ಬಿದ್ದಿದ್ದು, ವಾಹನದ ಚಾಲಕ ಹಾಗೂ ಆಸುಪಾಸಿನಲ್ಲಿದ್ದ ಸಾರ್ವಜನಿಕರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೃಹತ್ ಕಟೌಟ್ ನಿಲ್ಲಿಸಲು ಕೇವಲ ಅರ್ಧ ಅಡಿ ಹಳ್ಳ ತೆಗೆದು ಕಂಬ ಹಾಕಿದ್ದ ಗುತ್ತಿಗೆದಾರರ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟೌಟ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ಈ ಅವಘಡ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 03, 2026 04:03 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More