ಮೈಸೂರು ದಸರಾ: ಆಟೋ ರಿಕ್ಷಾದಲ್ಲಿ ಸಂಚರಿಸಿ ಗಮನಸೆಳೆದ ಸಚಿವ ಕೃಷ್ಣಭೈರೇಗೌಡ, ಸರಳತೆಗೆ ವ್ಯಾಪಕ ಮೆಚ್ಚುಗೆ

Edited By:

Updated on: Oct 21, 2026 | 10:02 AM

ಮೈಸೂರು ದಸರಾ ಸಂಭ್ರಮದ ನಡುವೆ ಸಚಿವ ಕೃಷ್ಣಭೈರೇಗೌಡ ಅವರ ಸರಳ ನಡೆ ಗಮನಸೆಳೆದಿದೆ. ಬೆಂಗಳೂರಿನಿಂದ ರೈಲಿನಲ್ಲಿ ಮಂಗಳವಾರ ರಾತ್ರಿ ಮೈಸೂರಿಗೆ ಬಂದ ಅವರು, ತಡರಾತ್ರಿ ಆಟೋದಲ್ಲಿ ನಗರದ ವಿವಿಧೆಡೆ ಸಂಚರಿಸಿ ದಸರಾ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. ಸಚಿವರ ಈ ಸರಳತೆಗೆ ಈಗ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮೈಸೂರು, ಅಕ್ಟೋಬರ್ 21: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಸಚಿವ ಕೃಷ್ಣಭೈರೇಗೌಡ ಅವರ ಸರಳ ನಡೆ ಗಮನಸೆಳೆದಿದೆ. ಬೆಂಗಳೂರಿನಿಂದ ರೈಲಿನಲ್ಲಿ ಮೈಸೂರಿಗೆ ಪ್ರಯಾಣಿಸಿದ ಸಚಿವರು, ತಡರಾತ್ರಿ ಆಟೋದಲ್ಲಿ ನಗರದ ವಿವಿಧೆಡೆ ಸಂಚರಿಸಿ ದಸರಾ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. ದಸರಾ ದೀಪಾಲಂಕಾರವನ್ನು ವೀಕ್ಷಿಸಲು ಸಚಿವರು ಆಟೋದಲ್ಲಿ ಸಂಚರಿಸಿದ್ದು, ಅವರ ಸರಳತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More