AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯ ಪ್ರಜ್ಞೆ ಇಲ್ವೇನ್ರೀ... ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ

ಸಮಯ ಪ್ರಜ್ಞೆ ಇಲ್ವೇನ್ರೀ… ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ

ರಾಮ್​, ಮೈಸೂರು
| Edited By: |

Updated on: Sep 28, 2026 | 11:09 AM

Share

ಮೈಸೂರು ದಸರಾ ಮಾವುತರು ಮತ್ತು ಕಾವಾಡಿಗರಿಗಾಗಿ ಆಯೋಜಿಸಿದ್ದ ಉಪಹಾರ ಕೂಟಕ್ಕೆ ಯತೀಂದ್ರ ಸಿದ್ದರಾಮಯ್ಯ ತಡವಾಗಿ ಬಂದಿದ್ದಕ್ಕೆ ಶಾಸಕ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 9 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಯತೀಂದ್ರ 10 ಗಂಟೆಗೆ ಆಗಮಿಸಿದ್ದರಿಂದ ಮಾವುತರು ಒಂದು ತಾಸು ಕಾಯಬೇಕಾಯಿತು.

ಮೈಸೂರು, ಸೆಪ್ಟೆಂಬರ್ 28: ಮೈಸೂರು ದಸರಾ ಗಜಪಡೆ ಮಾವುತರು ಮತ್ತು ಕಾವಾಡಿಗರಿಗಾಗಿ ಆಯೋಜಿಸಿದ್ದ ಉಪಹಾರ ಕೂಟಕ್ಕೆ ತಡವಾಗಿ ಆಗಮಿಸಿದ್ದ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಉಪಹಾರ ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಒಂದು ತಾಸು ತಡವಾಗಿ, ಅಂದರೆ 10 ಗಂಟೆಗೆ ಆಗಮಿಸಿದರು. ಇದರಿಂದ ಮಾವುತರು ಮತ್ತು ಕಾವಾಡಿಗರು ಒಂದು ಗಂಟೆ ಕಾಲ ಕಾಯುವಂತಾಯಿತು.

ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿದ್ದ ಶಾಸಕ ತನ್ವೀರ್ ಸೇಠ್, ಯತೀಂದ್ರ ಸಿದ್ದರಾಮಯ್ಯ ಅವರ ವಿಳಂಬದಿಂದ ಬೇಸರಗೊಂಡರು. 9:45ರವರೆಗೂ ಕಾದಿದ್ದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ‘‘ಸಮಯ ಪ್ರಜ್ಞೆ ಇಲ್ವೇನ್ರೀ? ದೇರ್ ಇಸ್ ಎ ಲಿಮಿಟ್ ಫಾರ್ ಎವರಿಥಿಂಗ್’’ ಎಂದು ಅವರು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಮಾವುತರು ಕಾಡಿನ ಜನರು, ಅವರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ಆಗಬೇಕು ಎಂದು ಸೇಠ್ ಪ್ರತಿಪಾದಿಸಿದರು. ನಂತರ ತನ್ವೀರ್ ಸೇಠ್ ಉಪಹಾರ ಕೂಟ ಸ್ಥಳದಿಂದ ತೆರಳಿದರು. ನಂತರ 10 ಗಂಟೆಗೆ ಯತೀಂದ್ರ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿ, ಮಾಜಿ ಸಚಿವ ಜಿ.ಟಿ. ದೇವೇಗೌಡರೊಂದಿಗೆ ಉಪಹಾರ ಕೂಟದಲ್ಲಿ ಪಾಲ್ಗೊಂಡರು. ಈ ಘಟನೆ ಮೈಸೂರು ಕಾಂಗ್ರೆಸ್ ವಲಯದಲ್ಲಿ ಸಣ್ಣ ಮಟ್ಟದ ಇರುಸುಮುರುಸು ಸೃಷ್ಟಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More