ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿ ಕಂಬಳ ವೈಭವ: ಡಾ. ಯತೀಂದ್ರ ಸಿದ್ದರಾಮಯ್ಯ ಸಿದ್ಧತೆ ಪರಿಶೀಲನೆ
ಈ ಬಾರಿ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಆಯೋಜಿಸಲಾಗುತ್ತಿದೆ. ದಸರಾಕ್ಕೆ ಹೊಸ ಸ್ಪರ್ಶ ನೀಡುವ ಹಾಗೂ ಕರ್ನಾಟಕದ ಅಸ್ಮಿತೆಯನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪುಟ್ಟೂರು ಶಾಸಕ ಅಶೋಕ್ ರೈ ಅವರಿಗೆ ಕಂಬಳ ಆಯೋಜನೆಯ ಜವಾಬ್ದಾರಿ ವಹಿಸಲಾಗಿದೆ. ಯಾವುದೇ ಅಡಚಣೆಯಿಲ್ಲದೆ ಯಶಸ್ವಿ ಕಂಬಳ ಆಯೋಜನೆಗೆ ಸಿದ್ಧತೆಗಳು ಭರದಿಂದ ಸಾಗಿವೆ.
ಮೈಸೂರು, ಅ.2: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ದಸರಾಕ್ಕೆ ಹೊಸತನದ ಸ್ಪರ್ಶ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದು, ಕಂಬಳದ ಮೂಲಕ ಕರ್ನಾಟಕದ ಅಸ್ಮಿತೆಯನ್ನು ದೇಶ ವಿದೇಶಗಳ ಪ್ರವಾಸಿಗರಿಗೆ ಪರಿಚಯಿಸುವ ಗುರಿ ಹೊಂದಲಾಗಿದೆ. ದಸರಾ ಸಮಯದಲ್ಲಿ ಕೇವಲ ರಾಜ್ಯದ ಜನ ಮಾತ್ರವಲ್ಲದೆ, ದೇಶ ಮತ್ತು ಅಂತರರಾಷ್ಟ್ರೀಯ ಮಟ್ಟದಿಂದಲೂ ಪ್ರವಾಸಿಗರು ಆಗಮಿಸುವುದರಿಂದ, ಕಂಬಳದ ಮೂಲಕ ನಮ್ಮ ದೇಶೀಯ ಕ್ರೀಡೆಯನ್ನು ವಿಶ್ವಕ್ಕೆ ಪರಿಚಯಿಸಲು ಇದೊಂದು ಉತ್ತಮ ಅವಕಾಶವಾಗಿದೆ. ಕಂಬಳ ಆಯೋಜನೆಯ ಜವಾಬ್ದಾರಿಯನ್ನು ಪುತ್ತೂರಿನ ಶಾಸಕ ಅಶೋಕ್ ರೈ ಅವರಿಗೆ ವಹಿಸಲಾಗಿದೆ. ಕಂಬಳದ ಆಯೋಜನೆಯಲ್ಲಿ ಅವರಿಗೆ ಇರುವ ಅಪಾರ ಜ್ಞಾನ ಮತ್ತು ಅನುಭವವನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅವರು ಕಂಬಳ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಸೂಕ್ತ ನಿರ್ದೇಶನಗಳನ್ನು ನೀಡಲಿದ್ದಾರೆ. ಜಿಲ್ಲಾಡಳಿತವು ಸಹ ಕಂಬಳ ಆಯೋಜನೆಗೆ ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿದೆ. ಯಾವುದೇ ಅಡಚಣೆಯಿಲ್ಲದೆ ಸುಗಮವಾಗಿ ಕಂಬಳವನ್ನು ಆಯೋಜಿಸಲು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಲಾಗಿದೆ. ಈ ಕಾರ್ಯಕ್ರಮವು ಮೈಸೂರು ಭಾಗದ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿದೆ. ಇನ್ನು ಕಂಬಳದ ಸಿದ್ಧತೆ ಬಗ್ಗೆ ಉಸ್ತುವರಿ ಸಚಿವ ಯತೀಂದ್ರ ಸಿದ್ದರಾಮಯ್ಯ ವೀಕ್ಷೆಣೆ ಮಾಡಿ ಮಾಹಿತಿ ಪಡೆದರು.
ವಿಡಿಯೋ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

