AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿಗೆ ಅನ್ನದಾತ ಬಲಿ: ಸಿಡಿದೆದ್ದ ರೈತರು, ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆ

ಹುಲಿಗೆ ಅನ್ನದಾತ ಬಲಿ: ಸಿಡಿದೆದ್ದ ರೈತರು, ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆ

ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 27, 2025 | 6:39 PM

Share

ಹುಲಿ ದಾಳಿಯಿಂದ ರೈತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ. ಮಹದೇವಪ್ಪ ಸಮ್ಮುಖದಲ್ಲಿ ರೈತರು ಅರಣ್ಯ ಸಚಿವ ಖಂಡ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಮಾನವ-ಪ್ರಾಣಿ ಸಂಘರ್ಷಕ್ಕೆ ಕಾರಣವಾದ ಗಣಿಗಾರಿಕೆ ಮತ್ತು ರೆಸಾರ್ಟ್‌ಗಳಂತಹ ಚಟುವಟಿಕೆಗಳ ಬಗ್ಗೆ ಪ್ರತಿಭಟನಾಕಾರರು ಪ್ರಶ್ನಿಸಿದರು.

ಮೈಸೂರು, ಅಕ್ಟೋಬರ್​ 27: ನಿನ್ನೆ ಹುಲಿ ದಾಳಿಗೆ ರೈತ (Farmer) ರಾಜಶೇಖರ(58) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಕೆಆರ್​ ಆಸ್ಪತ್ರೆ ಶವಾಗಾರದ ಬಳಿ‌ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ್ದರು. ಇನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪ್ರತಿಭಟನಾಕಾರರು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.