AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ: ತಮಿಳುನಾಡಿಗೆ ನೀರು ಹರಿಸುವುದಕ್ಕೆ ತೀವ್ರ ಆಕ್ರೋಶ!

ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ: ತಮಿಳುನಾಡಿಗೆ ನೀರು ಹರಿಸುವುದಕ್ಕೆ ತೀವ್ರ ಆಕ್ರೋಶ!

ರಾಮ್​, ಮೈಸೂರು
| Edited By: |

Updated on: Sep 01, 2026 | 11:27 AM

Share

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಕಬಿನಿ ಡ್ಯಾಂ ನೀರಿನ ಮಟ್ಟ 72 ಅಡಿಗೆ ಕುಸಿದಿದ್ದರೂ ಪ್ರತಿನಿತ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಲು ಆಗ್ರಹಿಸಿದ್ದಾರೆ.

ಮೈಸೂರು, ಸೆಪ್ಟೆಂಬರ್ 01: ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸಂಪೂರ್ಣ ಭರ್ತಿಯಾಗಿದ್ದ ಡ್ಯಾಂನಿಂದ ಪ್ರತಿನಿತ್ಯ 8,000 ಕ್ಯೂಸೆಕ್ ನೀಡಿದ್ದರಿಂದ ನೀರಿನ ಮಟ್ಟ 84 ಅಡಿಯಿಂದ 72 ಅಡಿಗೆ ಕುಸಿದಿದೆ. ಒಳಹರಿವು ಕೇವಲ 4,500 ಕ್ಯೂಸೆಕ್ಸ್‌ಗೆ ತಗ್ಗಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಧರಣಿನಿರತರು ಆಕ್ರೋಶ ಹೊರಹಾಕಿದ್ದಾರೆ. ಜಲಾಶಯದ ಮುಂಭಾಗ ಧರಣಿ ಕುಳಿತ ರೈತರು, ತಹಶೀಲ್ದಾರ್ ಶ್ರೀನಿವಾಸ್ ಹಾಗೂ ಎಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ತಮಿಳುನಾಡಿಗೆ ಮಣಿಯುವುದನ್ನು ನಿಲ್ಲಿಸಿ ತಕ್ಷಣವೇ ನೀರು ಹರಿಸುವುದನ್ನು ತಡೆಯಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More