ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ

Edited By:

Updated on: Feb 21, 2025 | 2:58 PM

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳಿಂದ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬೇಸಿಗೆಯಿಂದ ಒಣಗಿರುವ ಕಾಡಿನಲ್ಲಿ ಬೆಂಕಿ ವೇಗವಾಗಿ ಹರಡುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುವಂತಾಗಿದೆ. ಈ ಘಟನೆಯಿಂದ ಪರಿಸರಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿದೆ.

ಮೈಸೂರು, ಫೆಬ್ರವರಿ 21: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ (fire) ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಚಾಮುಂಡಿಬೆಟ್ಟದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಬೇಸಿಗೆ ಆರಂಭವಾಗಿರುವುದರಿಂದ ಕಾಡು ಒಣಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಹಾಸಹ ಪಡುವಂತಾಗಿದೆ. ಕರ್ನಾಟಕದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ತಾಪ ಹೆಚ್ಚಾಗಿದೆ. ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 21, 2025 02:50 PM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More